ಬೆಂಗಳೂರು: ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿ ಸಂಸದರಾಗಿ ಆಯ್ಕೆಯಾಗಿರೋ ಪ್ರಜ್ವಲ್ ರೇವಣ್ಣ ಅವರನ್ನ ಸಂಸತ್ ಸ್ಥಾನದಿಂದಅನರ್ಹಗೊಳಿಸಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಅದೇ ಅರ್ಜಿಗೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ಅವರಿಗೆ ಕೊರ್ಟ್ ಸಿಬ್ಬಂದಿ (ಕೋರ್ಟ್ ಅಮೀನ್) ಮೂಲಕ ಆಕ್ಷೇಪಣೆ ಸಲ್ಲಿಸುವಂತೆ ನೋಟಿಸ್ ನೀಡಿದೆ.
ಸಂಸದ ಪ್ರಜ್ವಲ್ಗೆ ಕೊರ್ಟ್ ಸಿಬ್ಬಂದಿಯಿಂದ ನೋಟಿಸ್! - ಕೊರ್ಟ್ ಸಿಬ್ಬಂದಿಯಿಂದ ನೋಟಿಸ್
ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂಬ ಆರೋಪ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದೆ. ಇದೇ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ಸಿಬ್ಬಂದಿ(ಕೋರ್ಟ್ ಅಮೀನ್) ಮೂಲಕ ಆಕ್ಷೇಪಣೆ ಸಲ್ಲಿಸುವಂತೆ ನೋಟಿಸ್ ನೀಡಿದೆ.
ಈ ಕುರಿತು ಹಾಸನದ ವಕೀಲರೂ ಆಗಿರುವ ದೇವರಾಜೇಗೌಡ, ಮಾಜಿ ಸಚಿವ ಎ.ಮಂಜು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿ ವಿಚಾರಣೆ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಈ ವೇಳೆ ಅರ್ಜಿದಾರರು ಇನ್ನೂ ಕೂಡ ಪ್ರಜ್ವಲ್ ಅವರಿಗೆ ನೋಟಿಸ್ ತಲುಪಿಲ್ಲ. ಹಾಗಾಗಿ ಅವರು ಇನ್ನೂ ಆಕ್ಷೇಪಣೆ ಹಾಕಿಲ್ಲ ಎಂದರು. ಈ ವೇಳೆ ನ್ಯಾಯಪೀಠ ಕೋರ್ಟ್ ಸಿಬ್ಬಂದಿ ಕೊರ್ಟ್ ಅಮೀನ್ ಮೂಲಕ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಹಾಕುವಂತೆ ಸೂಚಿಸಿದೆ.
ಏನಿದು ಪ್ರಕರಣ: ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿ ಸುಳ್ಳು ಮಾಹಿತಿ ನೀಡಿದ್ದಾರೆ. ಹಾಗೆ ಹಲವು ಕಂಪೆನಿಗಳಲ್ಲಿ ಪಾಲುದಾರಿಕೆ ಹೊಂದಿದ್ದರೂ ಅದನ್ನ ಚುನಾವಣಾ ಸಂಧರ್ಭದಲ್ಲಿ ಪ್ರಮಾಣ ಪತ್ರದಲ್ಲಿ ನಮೂದಿಸಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಸಾಲದ ವ್ಯವಹಾರವನ್ನೂ ಮುಚ್ಚಿಟ್ಟಿದ್ದಾರೆ. ಸುಮಾರು ಕೋಟಿ ವೌಲ್ಯದ ಆಸ್ತಿ ಬಗ್ಗೆ ವಿವರ ನೀಡಿಲ್ಲ ಎಂದು ಅರ್ಜಿದಾರರು ಅರ್ಜಿಯಲ್ಲಿ ನಮೂದಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು.