ಬೆಂಗಳೂರು :ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.
ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ - ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಸಿಬಿಐ ಕಸ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮನ್ಸೂರ್‌ನನ್ನು ಸಿಟಿ ಸಿವಿಲ್ ಕೋರ್ಟ್‌ನ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಮನ್ಸೂರ್ ಖಾನ್ ಸಿಬಿಐ ವಿಚಾರಣೆ ಹೆಚ್ಚಿನ ಅವಶ್ಯಕತೆ ಇರದ ಹಿನ್ನೆಲೆ ಸೆ. 30 ರವರೆಗೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಹಿನ್ನೆಲೆ :ಐಎಂಎ ಪ್ರಕರಣದಲ್ಲಿ ಮನ್ಸೂರ್ ಖಾನ್ ಪ್ರಮುಖ ಆರೋಪಿಯಾಗಿದ್ದು, ಈತನನ್ನ ಎಸ್ಐಟಿ ಬಂಧನ ಮಾಡಿತ್ತು. ನಂತರ ಪ್ರಕರಣ ಸಿಬಿಐ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ನನ್ನು ಸಿಬಿಐ ಹೆಚ್ಚಿನ ವಿಚಾರಣೆಗೆ ಬಾಡಿ ವಾರೆಂಟ್ ಮೂಲಕ ಕಷ್ಟಡಿಗೆ ಪಡೆದಿತ್ತು.