ಕರ್ನಾಟಕ

karnataka

ETV Bharat / state

10 ದಿನಗಳಲ್ಲಿ ವಿದ್ಯಾಗಮ ಪುನರಾರಂಭಿಸಲು ನಿರ್ಧರಿಸಿ: ಸರ್ಕಾರಕ್ಕೆ ಹೈಕೋರ್ಟ್​​ ಸೂಚನೆ - COVID pandemic Vidyagama scheme

ಬಡ ಮಕ್ಕಳಿಗೆ ಆನ್​ಲೈನ್ ಮೂಲಕ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಲ್ಯಾಪ್​ಟಾಪ್, ಇಂಟರ್​ನೆಟ್, ಮೊಬೈಲ್ ಸೇರಿದಂತೆ ಅಗತ್ಯ ತಾಂತ್ರಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ವಕೀಲ ಸಂಜೀವ್ ನರೇನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿವಿ ನಾಗರತ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.

High Court
ಹೈಕೋರ್ಟ್​

By

Published : Dec 8, 2020, 4:35 AM IST

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಸ್ಥಗಿತಗೊಂಡಿರುವ ಪರಿಣಾಮ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಶಿಕ್ಷಣ ಮುಂದುವರಿಸಲು ಜಾರಿಗೆ ತಂದು ಸದ್ಯ ಸ್ಥಗಿತಗೊಳಿಸಿರುವ "ವಿದ್ಯಾಗಮ" ಯೋಜನೆಯನ್ನು ಪುನಃ ಆರಂಭಿಸಬಹುದೇ ಎಂಬುದರ ಕುರಿತು ಸರ್ಕಾರ ತನ್ನ ನಿಲುವು ತಿಳಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಬಡ ಮಕ್ಕಳಿಗೆ ಆನ್​ಲೈನ್ ಮೂಲಕ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಲ್ಯಾಪ್​ಟಾಪ್, ಇಂಟರ್​ನೆಟ್, ಮೊಬೈಲ್ ಸೇರಿದಂತೆ ಅಗತ್ಯ ತಾಂತ್ರಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ವಕೀಲ ಸಂಜೀವ್ ನರೇನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿವಿ ನಾಗರತ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಬೆಂಗಳೂರು ಗಲಭೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಅವಧಿ ವಿಸ್ತರಣೆ: NIAಗೆ ಹೈಕೋರ್ಟ್ ನೋಟಿಸ್

ಈ ವೇಳೆ ಸರಕಾರದ ಪರ ವಕೀಲರು ವಾದಿಸಿ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಪರಿಣಾಮ ಸರ್ಕಾರದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ. ಹೀಗಾಗಿ ಅರ್ಜಿದಾರರ ಕೋರಿಕೆಯಂತೆ ರಾಜ್ಯದ ಬಡಮಕ್ಕಳಿಗೆ ಮೊಬೈಲ್ ಲ್ಯಾಪ್​ಟಾಪ್​ ಇಂಟರ್​ನೆಟ್ ಮತ್ತಿತರ ಸೌಲಭ್ಯಗಳನ್ನು ಒದಗಿಸುವುದು ಕಷ್ಟ. ಇನ್ನು ಕೊರೊನಾ ಪ್ರಕರಣಗಳು ಹೆಚ್ಚಿದ್ದರಿಂದ ವಿದ್ಯಾ ಗಮ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಸದ್ಯ ಚಂದನ ವಾಹಿನಿ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲಾಗುತ್ತಿದೆ ಎಂದರು.

ಸರ್ಕಾರದ ಪರ ವಕೀಲರ ವಾದ ದಾಖಲಿಸಿಕೊಂಡ ಪೀಠ, ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಹೇಳಿಕೊಂಡಿದೆ. ಇಂತಹ ಸಂದರ್ಭದಲ್ಲಿ, ಗ್ರಾಮೀಣ ಪ್ರದೇಶದಲ್ಲಿ ತಾಂತ್ರಿಕ ಸೌಲಭ್ಯ ಇಲ್ಲದ ಮಕ್ಕಳಿಗೆ ಶಿಕ್ಷಣ ನೀಡಲು ಸರ್ಕಾರವೇ ರೂಪಿಸಿದ್ದ ವಿದ್ಯಾಗಮ ಯೋಜನೆಯನ್ನು ಮತ್ತೆ ಆರಂಭಿಸಲು ಸಾಧ್ಯವೇ ಎಂಬ ಬಗ್ಗೆ ಮುಂದಿನ 10 ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸೂಚಿಸಿತು. ಅಲ್ಲದೆ, ಮಕ್ಕಳಿಗೆ ಲ್ಯಾಪ್​ಟಾಪ್, ಟ್ಯಾಬ್ಲೆಟ್, ಮೊಬೈಲ್, ಇಂಟರ್​ನೆಟ್, ಕಂಪ್ಯೂಟರ್ ವಿತರಿಸಲು ಅನುಕೂಲವಾಗುವಂತೆ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್) ಮೂಲಕವೂ ಸರ್ಕಾರ ಕಾರ್ಪೊರೇಟ್ ಕಂಪನಿಗಳಿಂದ ನಿಧಿ ಸಂಗ್ರಹಿಸಬಹುದು. ಒಂದೊಮ್ಮೆ ಸಿಎಸ್ಆರ್ ಮೂಲಕ ಹಣ ಸಂಗ್ರಹಿಸಲು ಸರ್ಕಾರ ಮುಂದಾದರೆ ಮಕ್ಕಳಿಗೆ ಶಿಕ್ಷಣ ಕಲ್ಪಿಸುವ ವ್ಯವಸ್ಥೆ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಖಾತರಿಪಡಿಸಬೇಕು ಎಂದು ತಿಳಿಸಿ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 17ಕ್ಕೆ ಮುಂದೂಡಿತು.

ABOUT THE AUTHOR

...view details