ಕರ್ನಾಟಕ

karnataka

ETV Bharat / state

ಹೆಚ್‌ಡಿಕೆಗೂ ಡಿನೋಟಿಫಿಕೇಶನ್‌ ಕಂಟಕ; ಏ.17ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ - ಕುಮಾರಸ್ವಾಮಿ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ

ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ ಜಮೀನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.

Court Summons to HD Kumaraswamy
ಕುಮಾರಸ್ವಾಮಿ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ

By

Published : Apr 1, 2021, 7:59 PM IST

Updated : Apr 1, 2021, 8:09 PM IST

ಬೆಂಗಳೂರು : ನಗರದ ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಗೈರುಹಾಜರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಏ.17ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ವಿಚಾರಣೆಗೆ ಹಾಜರಾದ ಹೆಚ್​ಡಿಕೆ ಪರ ವಕೀಲರು ಮೆಮೋ ಸಲ್ಲಿಸಿ, ಕ್ವಾರಂಟೈನ್​ನಲ್ಲಿ ಇರುವುದರಿಂದ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ವಿಚಾರಣೆಗೆ ಪದೇ ಪದೇ ಗೈರಾಗುತ್ತಿದ್ದಾರೆ. ಕ್ವಾರಂಟೈನ್ ಇದ್ದರೆ ಮನೆಯಲ್ಲಿ ಇರಬೇಕಲ್ಲವೇ, ಹೊರಗೆ ಓಡಾಡಿಕೊಂಡಿದ್ದಾರೆ ಎಂದಿತು. ಜೊತೆಗೆ, ಮುಂದಿನ ವಿಚಾರಣೆಗೆ ತಪ್ಪದೇ ಹಾಜರಾಗಬೇಕೆಂದು ಸೂಚಿಸಿ ಸಮನ್ಸ್ ಜಾರಿ ಮಾಡಿ, ವಿಚಾರಣೆಯನ್ನು ಏ.17ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

ಕುಮಾರಸ್ವಾಮಿಯ 2006 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್​ ಅನ್ನು ಜನಪ್ರತಿನಿಧಿ ನ್ಯಾಯಾಲಯವು ರದ್ದುಪಡಿಸಿ ವಿಚಾರಣೆಗೆ ಮುಂದಾಗಿತ್ತು. ಅಕ್ಟೋಬರ್ 4ರಂದು ಕುಮಾರಸ್ವಾಮಿಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿತ್ತು. ಇದರ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿ ವಿಚಾರಣೆಗೆ ತಡೆಯಾಜ್ಞೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2006 ರಲ್ಲಿ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಬಡಾವಣೆಗಾಗಿ ವಶಪಡಿಸಿಕೊಂಡಿದ್ದ 3 ಎಕರೆ 34 ಗುಂಟೆ ಜಮೀನನ್ನು ನಿಯಮ ಬಾಹಿರವಾಗಿ ಡಿನೋಟಿಫೈ ಮಾಡಿದ್ದಾರೆಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಎಂ.ಎಸ್ ಮಹದೇವಸ್ವಾಮಿ ಲೋಕಾಯುಕ್ತಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಸಿರಿಮನೆ ಜಲಪಾತ ಬಳಿ ಅಕ್ರಮ ಕಟ್ಟಡ ನಿರ್ಮಾಣ: ತೆರವು ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ದೂರಿನ ಮೇರೆಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, 2019ರ ಜನವರಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಆಕ್ಷೇಪಿಸಿ ದೂರುದಾರ ಮಹಾದೇವಸ್ವಾಮಿ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ, 2019ರ ಜುಲೈ 20 ರಂದು ಬಿ ರಿಪೋರ್ಟ್ ರದ್ದುಪಡಿಸಿತ್ತು. ಅಲ್ಲದೆ, ಅಕ್ಟೋಬರ್ 4ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿ ಸೇರಿ 19 ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿತ್ತು.

ಆ ಬಳಿಕ ಹೆಚ್​ಡಿಕೆ ಜನಪ್ರತಿನಿಧಿಗಳ ಕೋರ್ಟ್ ಜಾರಿ ಮಾಡಿರುವ ಸಮನ್ಸ್ ಸೇರಿದಂತೆ ಇಡೀ ಪ್ರಕರಣ ರದ್ದುಕೋರಿ ಹೈಕೋಟ್​​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, 2020 ಅಕ್ಟೋಬರ್ 14ರಂದು ಮನವಿ ವಜಾ ಮಾಡಿತ್ತು. ಪ್ರಕರಣ ವಿಚಾರಣಾ ಹಂತದಲ್ಲಿರುವುದರಿಂದ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದಿತ್ತು. ಅದರಂತೆ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ಹೆಚ್​ಡಿಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

Last Updated : Apr 1, 2021, 8:09 PM IST

ABOUT THE AUTHOR

...view details