ಕರ್ನಾಟಕ

karnataka

ETV Bharat / state

ಬಿಎಸ್​ವೈ ಸಂಪುಟದ ಮತ್ತೋರ್ವ ಸಚಿವನಿಗೆ ಕೊರೊನಾ: ಶ್ರೀಮಂತ ಪಾಟೀಲ್​ಗೆ ಕೋವಿಡ್ - ಮಹಾಮಾರಿ ಕೊರೊನಾ ವೈರಸ್​ ಸುದ್ದಿ

ಮಹಾಮಾರಿ ಕೊರೊನಾ ವೈರಸ್​ ಹಾವಳಿ ರಾಜ್ಯದಲ್ಲಿ ಜೋರಾಗಿದ್ದು, ಇದೀಗ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಸಂಪುಟದ ಮತ್ತೋರ್ವ ಸಚಿವರಿಗೆ ಸೋಂಕು ಕಾಣಿಸಿಕೊಂಡಿದೆ.

state minister srimanth patil
state minister srimanth patil

By

Published : Oct 1, 2020, 10:34 PM IST

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದ ಮತ್ತೋರ್ವ ಸಚಿವ ಕೊರೊನಾ ಸೋಂಕಿಗೆ ಸಿಲುಕಿದ್ದಾರೆ. ಕೊರೊನಾ ಪರೀಕ್ಷೆಯಲ್ಲಿ ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್​ಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಶ್ರೀಮಂತ್​ ಪಾಟೀಲ್​ಗೆ ಕೊರೊನಾ
ಇಂದು ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ ಎಂದು ಸಚಿವ ಶ್ರೀಮಂತ ಪಾಟೀಲ್ ಟ್ವೀಟ್ ಮಾಡಿದ್ದಾರೆ. ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಮುಖಂಡರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು, ಅವರೆಲ್ಲ ಗುಣಮುಖರಾಗಿದ್ದಾರೆ.

ABOUT THE AUTHOR

...view details