ಬೆಂಗಳೂರು :ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ನಗರದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಮೈಕ್ ಮೂಲಕ ನಿಯಮ ಪಾಲಿಸದವರನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ.
ನಗರದ ಮಾರುಕಟ್ಟೆ ಪ್ರದೇಶಗಳು, ಮೆಜೆಸ್ಟಿಕ್ ಬಸ್ ನಿಲ್ದಾಣದ ಸುತ್ತಮುತ್ತ ಸೇರಿ ಜನನಿಬಿಡ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಮತ್ತು ಮಾಸ್ಕ್ ಧರಿಸುವುವಂತೆ ಪೊಲೀಸರು ಮೈಕ್ ಮೂಲಕ ಮನವಿ ಮಾಡಿದರು. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಎಚ್ಚರಿಸಿದರು.