ಬೆಂಗಳೂರು: ರಾಜ್ಯದಲ್ಲಿಂದು 1,56,902 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಈ ಪೈಕಿ 1,117 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,55,164 ತಲುಪಿದೆ.
ಪಾಸಿಟಿವಿಟಿ ದರ 0.71% ರಷ್ಟಿದೆ. 1,354 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 29,00,228 ಜನರು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 17,501 ರಷ್ಟಿವೆ.
ಎರಡನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ಸಾವಿನ ಸಂಖ್ಯೆ ಇಳಿಕೆ ಕಂಡಿದೆ. ಇಂದು 8 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗಿನ ಸಾವಿನ ಸಂಖ್ಯೆ 37,409. ಈ ಮೂಲಕ ಪಾಸಿಟಿವಿಟಿ ದರ ಹಾಗೂ ಸಾವಿನ ಶೇಕಡಾವಾರು 0.71% ರಷ್ಟಿದ್ದು ಸಮವಾಗಿದೆ.
ಬೆಂಗಳೂರಿನಲ್ಲಿ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು:
ರಾಜಧಾನಿ ಬೆಂಗಳೂರಿನಲ್ಲಿಂದು ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ಇಂದು 358 ಮಂದಿಗೆ ಸೋಂಕು ದೃಢಪಟ್ಟಿದ್ದರೆ, 530 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಐದು ಮಂದಿ ಸೋಂಕಿತರು ಮೃತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,205.
ರೂಪಾಂತರಿ ವೈರಸ್ ವಿವರ: