ಕರ್ನಾಟಕ

karnataka

ETV Bharat / state

ಕೊರೊನಾ ಅಲೆಗೆ ನಲುಗಿದ ಸರ್ಕಾರ.. ಎಎಸ್‌ಸಿ ಕೇಂದ್ರದಲ್ಲಿ ಕೋವಿಡ್‌ ಕೇರ್ ಸೆಂಟರ್

ಎರಡನೇ ಮತ್ತು ಮೂರನೇ ಅಲೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸೇನೆಗೆ ಸೇರಿದ ಎಎಸ್‌ಸಿ ಕೇಂದ್ರ ಮತ್ತು ಕಾಲೇಜಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ‌ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

meeting
meeting

By

Published : May 18, 2021, 6:40 PM IST

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡ್‌ ಆಸ್ಪತ್ರೆ ಬಳಿ ಇರುವ ಸೇನೆಗೆ ಸೇರಿದ ಎಎಸ್‌ಸಿ ಕೇಂದ್ರ ಮತ್ತು ಕಾಲೇಜಿನಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ‌ ಮಾಡಲಾಗುತ್ತಿದೆ.

ಈ ಕುರಿತು ಎಎಸ್‌ಸಿ ಕಮಾಂಡರ್‌ ಲೆಫ್ಟಿನೆಂಟ್‌ ಬಿ.ಕೆ. ರೆಸ್‌ಪಾಸ್‌ ವಾಲ್‌ ಅವರ ಜತೆ ಡಿಸಿಎಂ ಅಶ್ವತ್ಥ್ ನಾರಾಯಣ ಮಾತುಕತೆ ನಡೆಸಿದರು. ಎಎಸ್‌ಸಿ ಸೆಂಟರ್‌ನಲ್ಲಿ ಕೊನೆಪಕ್ಷ 500 ಬೆಡ್‌ಗಳ ಕೋವಿಡ್‌ ಕೇಂದ್ರ ಸ್ಥಾಪನೆಯ ಪ್ತಸ್ತಾಪನೆಯನ್ನು ಮುಂದಿಟ್ಟರಲ್ಲದೆ, ಈ ಕೋವಿಡ್‌ ಕೇರ್‌ ಸೆಂಟರ್​ಗೆ ಅಗತ್ಯವಾದ ಮೂಲಸೌಕರ್ಯವನ್ನು ಸರ್ಕಾರ ಒದಗಿಸಲಿದೆ. ಸೇನೆ ವತಿಯಿಂದ ವೈದ್ಯರು, ಸಿಬ್ಬಂದಿ ಮತ್ತು ಅರೆವೈದ್ಯ ಸಿಬ್ಬಂದಿಯನ್ನು ಒದಗಿಸುವಂತೆ ಕೋರಿದರು. ಎರಡನೇ ಮತ್ತು ಮೂರನೇ ಅಲೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕೇಂದ್ರದಲ್ಲಿ ಕೋವಿಡ್‌ ಕೇರ್‌ ಸೆಂಟರ್​ ಸ್ಥಾಪನೆಗೆ ಅವಕಾಶ ನೀಡಬೇಕು. ವಿವಿಧ ಹಂತಗಳಲ್ಲಿ ಇಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಬಹುದು ಎಂದರು.

ಇದಕ್ಕೆ ಬಿ.ಕೆ. ರೆಸ್‌ಪಾಸ್‌ ವಾಲ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರಲ್ಲದೆ, ಕೋವಿಡ್‌ ವಿರುದ್ಧ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಸೇನೆಯೂ ಹೆಗಲು ಕೊಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಎಎಸ್‌ಸಿ ಕೇಂದ್ರದಲ್ಲಿ ಕೋವಿಡ್‌ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಲೆಫ್ಟಿನೆಂಟ್‌ ಬಿ.ಕೆ. ರೆಸ್‌ಪಾಸ್‌ ವಾಲ್‌ ಅವರು ಡಿಸಿಎಂ ಅವರಿಗೆ ಮಾಹಿತಿ ನೀಡಿದರಲ್ಲದೆ, ಆ ಸೌಲಭ್ಯಗಳನ್ನು ತೋರಿಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ, ಡಿಸಿಎಂ ಕಾರ್ಯದರ್ಶಿ ಪ್ರದೀಪ್‌ ಪ್ರಭಾಕರ್‌, ಭಾರತ್‌ ಸ್ಕೌಟ್ಸ್‌ & ಗೈಡ್ಸ್‌ನ ರಾಜ್ಯ ಸರ್ಕಾರದ ಸಲಹೆಗಾರರಾದ ಜಿ.ಎಂ. ಬಾಬು ಮುಂತಾದವರು ಇದ್ದರು.

ABOUT THE AUTHOR

...view details