ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣದಲ್ಲಿವೆ. ತಜ್ಞರ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ಅಲೆಗಳನ್ನು ನಿಯಂತ್ರಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಕಚೇರಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳನ್ನು ಕೋವಿಡ್ನಿಂದ ರಕ್ಷಿಸಲು ಪೋಷಕರ ಪಾತ್ರ ಪ್ರಮುಖವಾಗಿದೆ. ಎಲ್ಲ ಪೋಷಕರೂ ಕಡ್ಡಾಯವಾಗಿ ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದರು.
ನಗರ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ, ಮೊದಲಿನಿಂದಲೂ ಜಾರಿಯಲ್ಲಿದ್ದು, ಪರಿಣಾಮಕಾರಿ ಜಾರಿಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳೊಂದಿಗೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು. ಕೇರಳ ಪ್ರಯಾಣಿಕರ ಆರ್ಟಿ-ಪಿಸಿಆರ್ ಕೋವಿಡ್ ಸೋಂಕು ಪರೀಕ್ಷೆ ಮಾಡಲು ಪ್ರತ್ಯೇಕ 11 ತಂಡಗಳ ರಚನೆ ಮಾಡಲಾಗಿದೆ. ಕೋವಿಡ್ ನಿಯಮಗಳಂತೆ ಟೆಸ್ಟ್ ರಿಪೋರ್ಟ್ ಇಲ್ಲದಿದ್ದರೆ ಕಡ್ಡಾಯ ಕ್ವಾರಂಟೈನ್ ಮಾಡಿ ಪರೀಕ್ಷೆ ಮಾಡಲಾಗುತ್ತಿದೆ ಎಂದರು.
ಓದಿ: ಹಿರಿಯ IAS ಅಧಿಕಾರಿಗಳ ವರ್ಗಾವಣೆ..ರಾಜ್ಯ ಸರ್ಕಾರದಿಂದ ಆದೇಶ