ಬೆಂಗಳೂರು:ರಾಜ್ಯದಲ್ಲಿ ಇಂದು 1,001 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,94,557 ಆಗಿದೆ.
ಇಂದು 1,465 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇವರೆಗೆ ಒಟ್ಟು 28,34,741ಜನರು ಡಿಸ್ಜಾರ್ಜ್ ಆಗಿದ್ದಾರೆ. ಈ ದಿನ ಸುಮಾರು 22 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 36,373ಕ್ಕೆ ಏರಿಕೆಯಾಗಿದೆ. ಸಾವಿನ ಶೇಕಡಾವಾರು ಪ್ರಮಾಣ ಶೇ. 2.19ರಷ್ಟಿದೆ. ಇತ್ತ 23,419 ಸಕ್ರಿಯ ಪ್ರಕರಣಗಳಿವೆ.