ಬೆಂಗಳೂರು: ಕೋವಿಡ್ ಶೈಕ್ಷಣಿಕ ಕ್ಷೇತ್ರಕ್ಕೆ ದೊಡ್ಡ ಹೊಡೆತ ಕೊಟ್ಟಿದೆ. ಶಾಲಾ-ಕಾಲೇಜುಗಳು ವರ್ಷ ಪೂರ್ತಿ ಮುಚ್ಚಲ್ಪಟ್ಟು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಕೆಟ್ಟ ಪರಿಣಾಮ ಬೀರಿದ್ದು ಸುಳ್ಳಲ್ಲ. ಅನುದಾನ ರಹಿತ ಖಾಸಗಿ ಶಾಲೆಗಳು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿವೆ. ಇತ್ತ ಶಿಕ್ಷಕರು ಶಿಕ್ಷಕೇತರ ಸಿಬ್ಬಂದಿಗೆ ಸರಿಯಾದ ವೇತನ ನೀಡಲಾಗಿದೆ ಸಂಕಷ್ಟ ಎದುರಿಸುವಂತಾಗಿದೆ.
ರುಪ್ಸಾ ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಈ ಸಂಬಂಧ ರುಪ್ಸಾ ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾತಾನಾಡಿದ್ದು, ಕಳೆದ 8 ತಿಂಗಳಿಂದ ಶಿಕ್ಷಣ ಸಚಿವರಿಗೆ ಮನವಿ ಮಾಡುತ್ತಾ ಬಂದಿದ್ದೇವೆ. ಖಾಸಗಿ ಅನುದಾನ ರಹಿತ ಶಾಲೆಗಳು ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದು, ಕೋವಿಡ್ನಿಂದ ಶಾಲೆಗಳು ನಡೆಯದೇ ಜೀವನವೇ ಅತಂತ್ರಗೊಂಡಿದೆ. ಪೋಷಕರು ಶುಲ್ಕ ಕಟ್ಟದೇ ಇರುವುದರಿಂದ ಶಿಕ್ಷಣ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿವೆ ಎಂದರು.
ಸುಳ್ಳಿನ ಭರವಸೆಗಳೊಂದಿಗೆ ಶಿಕ್ಷಣ ಸಚಿವರು:
ರಾಜ್ಯ ಸರ್ಕಾರದಿಂದ ಕನಿಷ್ಠ ಸಹಾಯಧನ ನೀಡುವಂತೆ ಮನವಿ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಕೊನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಶಾಲಾ ಕಟ್ಟಡದ ಲೋನ್, ವೆಹಿಕಲ್ ಲೋನ್, ಬ್ಯಾಂಕ್ ಲೋನ್ ಕಟ್ಟುವುದಕ್ಕೆ ಆರು ತಿಂಗಳ ಸಮಯಾವಕಾಶ ಕೋರುವುದಾಗಿ ಶಿಕ್ಷಣ ಸಚಿವರು ತಿಳಿಸಿದರು. ಆದರೆ ನಂತರದ ದಿನಗಳಲ್ಲಿ ಸಚಿವರ ಭರವಸೆ ಸುಳ್ಳು ಎಂದು ತಿಳಿಯಿತು ಎಂದು ಕಿಡಿಕಾರಿದರು.
ಶಿಕ್ಷಣ ಸಚಿವರು ಕೇವಲ ಸುಳ್ಳಿನ ಭರವಸೆ ನೀಡುತ್ತಾ ಬಂದಿದ್ದಾರೆ. ಒಂದು ಪ್ರದೇಶದ ಪ್ರಗತಿಗೆ ಶಿಕ್ಷಣ, ಆರೋಗ್ಯ ಮುಖ್ಯವಾಗುತ್ತದೆ. ಆದರೆ ಇಂತಹ ಸುಳ್ಳು ಸಚಿವರು ಶಿಕ್ಷಣ ಕ್ಷೇತ್ರವನ್ನೇ ಸಂಪೂರ್ಣ ಹಾಳು ಮಾಡುತ್ತಿದ್ದಾರೆಂದು ಆಕ್ರೋಶ ಹೊರಹಾಕಿದರು.
ಇದನ್ನೂ ಓದಿ:ಆರೋಪಗಳಿಂದ ಬಹಳ ನೊಂದಿದ್ದೇನೆ: ಭಾವುಕರಾದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಸದ್ಯ, ರುಪ್ಸಾ ಸಂಘದಿಂದ ಸಿಎಂ ಯಡಿಯೂರಪ್ಪ, ಪ್ರಧಾನಿ ಮೋದಿಯವರಿಗೆ ಪತ್ರವನ್ನ ಬರೆಯಲಾಗಿದೆ. ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಉಳಿವಿಗೆ ಸರ್ಕಾರ ಕೈಜೋಡಿಸಬೇಕಿದೆ ಎಂದು ಮನವಿ ಮಾಡಿದರು.