ಕರ್ನಾಟಕ

karnataka

ETV Bharat / state

ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಕೋವಿಡ್​ ಸೋಂಕಿತೆ ಬಲಿ.. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಕೊನೆಯುಸಿರು - ಬೆಂಗಳೂರು ಬೆಡ್ ಕೊರತೆ

ಮಹಿಳೆಗೆ ಸೂಕ್ತ ಚಿಕಿತ್ಸೆ ದೊರಕದೇ ಸಾವನಪ್ಪಿದ್ದು, ಬಿಬಿಎಂಪಿಯ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ವಾರ್ ರೂಂಗೆ ಹಲವಾರು ಬಾರಿ ಕರೆ ಮಾಡಿದರೂ ಬೆಡ್ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕುಟುಂಬಸ್ತರು ಆರೋಪಿಸಿದ್ದಾರೆ.

Covid infected woman died for BBMP negligence in Bangalore
ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಕೋವಿಡ್​ ಸೋಂಕಿತೆ ಬಲಿ

By

Published : Apr 23, 2021, 3:57 PM IST

ಬೆಂಗಳೂರು:ರಾಜಧಾನಿಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರಕದೇ ಕೋವಿಡ್ ಸೋಂಕಿತರು ಸಾವನಪ್ಪುತ್ತಿರುವ ಪ್ರಕರಣ ವರದಿಯಾಗುತ್ತಿರುವ ನಡುವೆಯೇ ಇಂದು 59 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ.

ಕಳೆದೆರಡು ದಿನದ ಹಿಂದೆ ಕೊರೊನಾ ಕಾಣಿಸಿಕೊಂಡಿದ್ದ ಕುರುಬರಹಳ್ಳಿಯ ಮಹಿಳೆಗೆ ಬಿಬಿಎಂಪಿಯಿಂದ ಬಿ.ಯು ನಂಬರ್ ನೀಡುವುದು ತಡವಾಗಿದೆ. ಅಲ್ಲದೇ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಮನೆಯಲ್ಲಿರಬೇಕಾದ ಪರಿಸ್ಥಿತಿ ಬಂದೊದಗಿತ್ತು.

ಇದೀಗ ಮಹಿಳೆಗೆ ಸೂಕ್ತ ಚಿಕಿತ್ಸೆ ದೊರಕದೇ ಸಾವನಪ್ಪಿದ್ದು, ಬಿಬಿಎಂಪಿಯ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ವಾರ್ ರೂಂಗೆ ಹಲವಾರು ಬಾರಿ ಕರೆ ಮಾಡಿದರೂ ಬೆಡ್ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸ್ಥಳಕ್ಕೆ ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪೀಣ್ಯ ಚಿತಾಗಾರಕ್ಕೆ ಶವ‘ ತಂದು ಅಂತ್ಯಸಂಸ್ಕಾರಕ್ಕೆ ನೆರವು ನೀಡಿದ್ದಾರೆ.

ಇದನ್ನೂ ಓದಿ:ಕೇರಳ ಜೈಲಿನಲ್ಲಿದ್ದ 60 ಕೈದಿಗಳಿಗೆ ಕೊರೊನಾ ದೃಢ..

ABOUT THE AUTHOR

...view details