ಕರ್ನಾಟಕ

karnataka

ETV Bharat / state

ಕಲಾವಿದರಿಗೆ ಸಿಹಿ ಸುದ್ದಿ.. ತಲಾ ಮೂರು ಸಾವಿರ ರೂ. ನೆರವು ನೀಡುವುದಕ್ಕೆ ಸಿಎಂ ಚಾಲನೆ - 3000 rupees covid package for artists ,

ಮೊದಲ ಅಲೆಯ ಸಂದರ್ಭದಲ್ಲಿಯೂ ಕಲಾವಿದರಿಗೆ ನೆರವು ನೀಡಲಾಗಿತ್ತು. ಈ ಬಾರಿಯೂ ಸರ್ಕಾರ ಅವರ ನೆರವಿಗೆ ಧಾವಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ಒದಗಿಸಲು ಮಂಜೂರಾತಿ ನೀಡಲಾಗಿದೆ.

CM ARTISTS COVID PACKAGE DISTRIBUTION
ಸಿಎಂ ಚಾಲನೆ

By

Published : Jun 22, 2021, 1:35 PM IST

ಬೆಂಗಳೂರು: ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000/- ರೂ.ಗಳ ಆರ್ಥಿಕ ನೆರವು ನೀಡುವ ಯೋಜನೆಯಡಿ 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿ.ಬಿ.ಟಿ. ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ‘ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ಒದಗಿಸಲು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ ವರ್ಗದವರಿಗೆ ಒಟ್ಟು 2,050 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದು, ಈಗಾಗಲೇ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳು ಮೊದಲಾದವರಿಗೆ ಡಿ.ಬಿ.ಟಿ. ಮೂಲಕ ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಉಳಿದ ವರ್ಗಗಳಿಗೂ ಶೀಘ್ರವೇ ನೆರವು ನೀಡಲು ಕ್ರಮ ವಹಿಸಲಾಗುತ್ತಿದೆ ಎಂದರು.

ಮೊದಲ ಅಲೆಯ ಸಂದರ್ಭದಲ್ಲಿಯೂ ಕಲಾವಿದರಿಗೆ ನೆರವು ನೀಡಲಾಗಿತ್ತು. ಈ ಬಾರಿಯೂ ಸರ್ಕಾರ ಅವರ ನೆರವಿಗೆ ಧಾವಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ನೀಡಲು ಮಂಜೂರಾತಿ ನೀಡಲಾಗಿದೆ. ಫಲಾನುಭವಿಗಳು ಡಿ.ಬಿ.ಟಿ. ಆ್ಯಪ್ ಮುಖಾಂತರ ತಮ್ಮ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗೆ ನೆರವು ವರ್ಗಾವಣೆ ಆಗಿರುವುದನ್ನು ಖಾತರಿ ಪಡಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದೀಗ ವಿವಿಧ ಜಿಲ್ಲೆಗಳಲ್ಲಿ ನಿರ್ಬಂದಗಳನ್ನು ತೆರವುಗೊಳಿಸಲಾಗಿದೆ. ಆದರೆ ಕಲಾವಿದರು ಮುನ್ನೆಚ್ಚರಿಕೆಯ ಕ್ರಮಗಳನ್ನು ತಪ್ಪದೆ ಪಾಲಿಸಬೇಕು. ಜೊತೆಗೆ ಲಸಿಕೆಯನ್ನು ಸಹ ಸರ್ಕಾರ ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಹಾಕಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಮನವಿ ಮಾಡಿದರು.

ಸಮಾರಂಭದಲ್ಲಿ ಮಾತನಾಡಿದ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಮೊದಲ ಅಲೆಯ ಸಂದರ್ಭದಲ್ಲಿಯೂ 17 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೆರವು ನೀಡಲಾಗಿತ್ತು. ಈಗ ಮತ್ತೆ ಕಲಾವಿದರಿಗೆ ತಲಾ 3 ಸಾವಿರ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.

ಮೂರು ಸಂಚಾರಿ ಲಸಿಕಾ ವಾಹನ ಬಿಬಿಎಂಪಿಗೆ ಹಸ್ತಾಂತರ :

ಮೂರು ಸಂಚಾರಿ ಲಸಿಕಾ ವಾಹನ ಬಿಬಿಎಂಪಿಗೆ ಹಸ್ತಾಂತರ

ಕೊರೊನಾ ಸಾಂಕ್ರಾಮಿಕ ನಿಯಂತ್ರಣ ಮಾಡುವಲ್ಲಿ ಸರ್ಕಾರದ ಜೊತೆ ಸಂಘ ಸಂಸ್ಥೆಗಳು ಕೈಜೋಡಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಾಂಸ್ಥಿಕ- ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಮೂರು ಸಂಚಾರಿ ಲಸಿಕಾ ವಾಹನ, ಒಂದು ಆ್ಯಂಬುಲೆನ್ಸ್ ಮತ್ತು ಒಂದು ಸ್ಯಾಂಪಲ್ ಕಲೆಕ್ಷನ್ ವಾಹನವನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಲಾಯಿತು. ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಹಲವಾರು ಸಂಘಸಂಸ್ಥೆಗಳು ಕೈ ಜೋಡಿಸುತ್ತಿರಯವುದು ಶ್ಲಾಘನೀಯ. ಫಾರೆಕ್ಸಲ್ ಇಂಟರ್​ನ್ಯಾಷನಲ್ ಇಂಡಿಯಾ ಪ್ರೈ. ಲಿ,ಫ್ಲೋಸರ್ವ್ ಇಂಡಿಯಾ ಕಂಟ್ರೋಲ್ಸ್ ಪ್ರೈ.ಲಿ,ಕೀ ಸೈಟ್ ಟೆಕ್ನಾಲಜೀಸ್ ಇಂಡಿಯಾ ಪ್ರೈ.ಲಿ, ವಿಪ್ರೋ ಜಿ.ಇ ಮೆಡಿಕಲ್ ಸಿಸ್ಟಂ ಸಂಸ್ಥೆಗಳು ಸಾಂಸ್ಥಿಕ-ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ನೆರವು ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದರು.

ಇದೇ ವೇಳೆ ಇಂದು ತಜ್ಞರು ಮೂರನೇ ಅಲೆ ಬಗ್ಗೆ ಏನು ವರದಿ ಕೊಡುತ್ತಾರೆ ಎಂಬುದನ್ನು ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ABOUT THE AUTHOR

...view details