ಬೆಂಗಳೂರು: ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಇಬ್ಬರಿಗೆ ಸೋಂಕು ತಗುಲಿದೆ.
ವಿಕಾಸಸೌಧದಲ್ಲಿ ಹಿರಿಯ IAS ಅಧಿಕಾರಿ ಸೇರಿ ಇಬ್ಬರಿಗೆ ಸೋಂಕು - ಐಎಎಸ್ ಅಧಿಕಾರಿ ಸೇರಿ ಇಬ್ಬರಿಗೆ ಪಾಸಿಟಿವ್
ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಇಬ್ಬರಿಗೆ ಸೋಂಕು ತಗುಲಿದೆ.
ವಿಕಾಸಸೌಧದ ನಾಲ್ಕನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಿನ್ನೆ ಈ ಸಿಬ್ಬಂದಿ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಇಂದು ಅವರ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರ ಕೊಠಡಿಯನ್ನು ಸೀಲ್ಡೌನ್ ಮಾಡಲಾಗಿದೆ.
ಇದೀಗ ವಿಕಾಸಸೌಧದಲ್ಲಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅವರ ಕಚೇರಿಯನ್ನೂ ಸಹ ಸ್ಯಾನಿಟೈಸರ್ ಮಾಡಿ ಸೀಲ್ಡೌನ್ ಮಾಡಲಾಗಿದೆ. ವಿಕಾಸಸೌಧದಲ್ಲಿ ಕೆಲಸ ಮಾಡುತ್ತಿದ್ದ ಐದು ಮಂದಿ ಸಿಬ್ಬಂದಿಗೆ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ವಿಧಾನಸೌಧದಲ್ಲಿ ವಾರ್ತಾ ಇಲಾಖೆ ಅಧಿಕಾರಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.