ಬೆಂಗಳೂರು: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.ಲಘು ರೋಗ ಲಕ್ಷಣ ಇದ್ದು, ಸದ್ಯ ಶಿರಸಿಯ ತಮ್ಮ ಮನೆಯಲ್ಲೇ ಹೋಮ್ ಐಸೋಲೆಷನ್ನಲ್ಲಿ ಇದ್ದಾರೆ.
ವಿಧಾನಸಭೆ ಸ್ಪೀಕರ್ ಕಾಗೇರಿಗೆ ಕೋವಿಡ್;ಶಿರಸಿಯಲ್ಲಿ ಹೋಮ್ ಐಸೋಲೇಷನ್! - bangalore news
ನಿನ್ನೆ ಮಾಸ್ಕ್ ಧರಿಸದೇ ಮದುವೆಯೊಂದರಲ್ಲಿ ಭಾಗಿಯಾದ ಸ್ಪೀಕರ್ ಕಾಗೇರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿತ್ತು. ಇದೀಗ ಕೊರೊನಾ ಪಾಸಿಟಿವ್ ಬಂದಿದೆ.
ಲಘು ರೋಗ ಲಕ್ಷಣ ಹಿನ್ನೆಲೆ ವೈದ್ಯರು ಮನೆಯಲ್ಲೇ ಐಸೋಲೇಷನ್ನಲ್ಲಿ ಇರುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ಮಾಸ್ಕ್ ಧರಿಸದೇ ಮದುವೆಯೊಂದರಲ್ಲಿ ಭಾಗಿಯಾದ ಸ್ಪೀಕರ್ ಕಾಗೇರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿತ್ತು. ಬೆಂಗಳೂರಿನಿಂದ ಆಗಮಿಸಿದ್ದ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ದಾಪುರದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ ಭಾಗಿಯಾಗಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿತ್ತು.
ಇದೀಗ ಸ್ಪೀಕರ್ ಕಾಗೇರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹೋಮ್ ಐಸೋಲೇಷನ್ನಲ್ಲಿ ಇದ್ದಾರೆ. ಸಣ್ಣದಾಗಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷೆಗೊಳಪಟ್ಟಿದ್ದರು.