ಬೆಂಗಳೂರು: ರಾಜ್ಯದಲ್ಲಿಂದು 40,898 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 188 ಮಂದಿಗೆ ಸೋಂಕು ದೃಢಪಟ್ಟಿದೆ. ಪಾಸಿಟಿವ್ ದರ 0.45% ರಷ್ಟಿದೆ.
816 ಸೋಂಕಿತರು ಗುಣಮುಖರಾಗಿದ್ದಾರೆ. ಈತನಕ 38,97,239 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 4,207 ರಷ್ಟಿದೆ. ಸೋಂಕಿಗೆ 12 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 39,969 ಏರಿಕೆ ಕಂಡಿದೆ. ಸಾವಿನ ಪ್ರಮಾಣ 6.38% ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು 2,111 ಪ್ರಯಾಣಿಕರು ಆಗಮಿಸಿದ್ದಾರೆ.