ಬೆಂಗಳೂರು: ಮೂರನೇ ಅಲೆಗೆ ಸಿಲುಕಿದ್ದ ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಂದಿದೆ.
ಕೋವಿಡ್ ನಿಯಮಗಳ ಸಡಿಲಿಕೆಯ ನಡುವೆಯೂ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಇಂದು ಕೇವಲ 382 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದರೂ ಮರಣ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಕೊಂಚ ನೆಮ್ಮದಿ ತಂದಿದೆ.
ಇಂದು 10 ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 39,979 ಸಾವು ಪ್ರಕರಣ ವರದಿಯಾಗಿದೆ. ಇಂದು 689 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 38,97,928 ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲೀಗ ಕೇವಲ 3,890 ಸಕ್ರಿಯ ಸೋಂಕಿತ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.04 ರಷ್ಟಿದೆ. ಮೃತಪಡುತ್ತಿರುವವರ ಪ್ರಮಾಣ ಶೇ.2.61 ಇದೆ.
ಬೆಂಗಳೂರಿನಲ್ಲಿಂದು 239 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,79,017 ತಲುಪಿದೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 16,928 ಇದೆ. 340 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ 17,59,458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ 2,630 ಸಕ್ರಿಯ ಸೋಂಕಿತ ಪ್ರಕರಣಗಳಿವೆ.