ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿಂದು ಸಾವಿರ ಗಡಿ ದಾಟಿದ ಕೋವಿಡ್, ಇಬ್ಬರು ಬಲಿ - ಇಬ್ಬರು ಕೋವಿಡ್​ ಗೆ ಬಲಿ

ರಾಜ್ಯದ ಇಂದಿನ ಕೋವಿಡ್ ವರದಿ ಹೀಗಿದೆ..

ಕೋವಿಡ್
ಕೋವಿಡ್

By

Published : Jun 29, 2022, 10:45 PM IST

ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಸೋಂಕು ಸಾವಿರ ಗಡಿ ದಾಟಿದೆ. ಇಂದು 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 1,154 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 39,22,541 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು 5,707 ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 4.84 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 3.35 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 6,69,62,355. ವಾರದ ಸಾವಿನ ಪ್ರಮಾಣ ಶೇ. 0.05 ರಷ್ಟಿದೆ.

ವಿಮಾನ ನಿಲ್ದಾಣದಿಂದ ಇಂದು ಕೋವಿಡ್‌ ತಪಾಸಣೆಗೆ 4,550 ಮಂದಿ ಒಳಗಾಗಿದ್ದು, ಇದುವರೆಗೂ 11,31,265 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ. ಬೆಂಗಳೂರಿನಲ್ಲಿ 1,109 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,033,107 ಕ್ಕೇರಿದೆ. ಇಂದು 1,093 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,80,745 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು 5,393 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,968.

ಇದನ್ನೂ ಓದಿ:ಕುಮಾರಸ್ವಾಮಿ ಎಂದರೇ ಲಾಟರಿ ಮುಖ್ಯಮಂತ್ರಿ, ಜೆಡಿಎಸ್​​ಗೆ ಇನ್ನು ಬಿಜೆಪಿ ಬೆಂಬಲವಿಲ್ಲ: ಆರ್​.ಅಶೋಕ್​

ABOUT THE AUTHOR

...view details