ಕರ್ನಾಟಕ

karnataka

ETV Bharat / state

ಸಂಪುಟ ಸಭೆಯಲ್ಲಿ ಕೋವಿಡ್ ಚರ್ಚೆ: 2ನೇ ಅಲೆ ನಿಯಂತ್ರಿಸಲು ಬಿಗಿ ಮುಂಜಾಗ್ರತಾ ಕ್ರಮ ಪಾಲಿಸುವ ಸಂಬಂಧ ಸಮಾಲೋಚನೆ

ಕೆಲ ದಿನಗಳಿಂದ ಕೊರೊನಾದ 2ನೇ ಅಲೆ ಶುರುವಾಗಿದ್ದು, ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಸಿಂಎ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಿ ಕೋವಿಡ್ 2ನೇ ಅಲೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.

ಸಿಎಂ ಯಡಿಯೂರಪ್ಪ
CM yadiyurappa

By

Published : Mar 22, 2021, 12:53 PM IST

ಬೆಂಗಳೂರು:ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ‌ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅದರ ನಿಯಂತ್ರಣ ಸಂಬಂಧ ಚರ್ಚೆ ನಡೆಸಲಾಯಿತು. ಸಭೆ ಸಮಾರಂಭ, ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ನಡೆಸಬೇಕು. ಕಾರ್ಯಕ್ರಮಗಳಲ್ಲಿ ನಿರ್ದಿಷ್ಟ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಸಂಪುಟ ಸಭೆಯಲ್ಲಿ ಲಾಕ್​​​ಡೌನ್ ಮತ್ತು ನೈಟ್ ಕರ್ಫ್ಯೂ ಬಗ್ಗೆ ಯಾವುದೇ ರೀತಿಯ ಚರ್ಚೆ ಆಗಿಲ್ಲ. ಬದಲಿಗೆ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಸಭೆ ಸಮಾರಂಭಗಳಲ್ಲಿ ಜನ ಸೇರುವಿಕೆ ನಿರ್ಬಂಧಿಸುವ ಸಂಬಂಧ ಬಿಗಿ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು ಎನ್ನಲಾಗಿದೆ.

ಓದಿ: ನರ್ಸಿಂಗ್ ಕಾಲೇಜು ಪರವಾನಗಿ ಹಗರಣ ಪ್ರಕರಣ: ಸದನ ಸಮಿತಿಗೆ ಸಿಎಂ ನಕಾರ

ಸಂಪುಟ ಸಭೆಯಲ್ಲಿ ಕೈಗೊಂಡ ಇತರ ತೀರ್ಮಾನ:

  • ಸುಪ್ರೀಂ ಕೋರ್ಟ್​ನಲ್ಲಿ ಮೀಸಲಾತಿ ಮಿತಿ ಹೆಚ್ಚಳ ಕುರಿತು ರಾಜ್ಯದ ನಿಲುವನ್ನು ಅಂತಿಮಗೊಳಿಸಲಾಯಿತು
  • 2020-21ನೇ ಸಾಲಿಗೆ ರಸಗೊಬ್ಬರ ಕಾಪು ದಾಸ್ತಾನು ಮಾಡಲು ರಾಜ್ಯ ಸಹಕಾರ ಮಹಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತವು 150 ಕೋಟಿಗಳ ಬ್ಯಾಂಕ್ ಸಾಲ ಪಡೆಯಲು ರಾಜ್ಯ ಸರ್ಕಾರದ ಖಾತ್ರಿ
  • ಬಳ್ಳಾರಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್‌ನ ಕ್ರಿಯಾ ಯೋಜನೆ-3ರಲ್ಲಿ ಅನುಮೋದಿತವಾಗಿರುವ ಹೊಸಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆಯಿಂದ 250 ಹಾಸಿಗೆ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು 104 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಗೆ ಅನುಮೋದನೆ
  • ಆರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ಅವಶ್ಯವಿರುವ ಉಪಕರಣ, ಪೀಠೋಪಕರಣ ಮತ್ತಿತರೆ ಪರಿಕರಗಳನ್ನು ಖರೀದಿಸಲು 24.83 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
  • ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸುತ್ತಿರುವ ಹೊಸ 15 ಓಟಿ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ 39.98 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ
  • ಕರ್ನಾಟಕ ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಔಷಧಾಪರಾಧ, ಜೂಜುಕೋರ, ಗೂಂಡಾ, ಅನೈತಿಕ ವ್ಯವಹಾರಗಳ ಅಪರಾಧ, ಕೊಳಚೆ ಪ್ರದೇಶಗಳನ್ನು ಆಕ್ರಮಿಸಿಕೊಳ್ಳುವ ಮತ್ತು ವಿಡಿಯೋ ಅಥವಾ ಆಡಿಯೋ ಪೈರೇಟ್ಸ್ ಚಟುವಟಿಎಕಗಳ (ತಿದ್ದುಪಡಿ) ವಿಧೇಯಕ, 2021ಕ್ಕೆ ಅನುಮೋದನೆ
  • ಕೈದಿಗಳ ಗುರುತಿನ (ಕರ್ನಾಟಕ ತಿದ್ದುಪಡಿ) ವಿಧೇಯಕ 2021, ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, 2021ಕ್ಕೆ ಅನುಮೋದನೆ
  • ರಾಜ್ಯಾದ್ಯಂತ ಸರ್ಕಾರಿ ಮಾಲೀಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ನಿಗದಿಪಡಿಸಿರುವ ದರ ಪರಿಷ್ಕರಣೆಗೆ ಒಪ್ಪಿಗೆ
  • ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ತಿದ್ದುಪಡಿ) ವಿಧೇಯಕ, 2021ಕ್ಕೆ ಅನುಮೋದನೆ
  • ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ 2021ಕ್ಕೆ ಅನುಮೋದನೆ
  • ಮೈಸೂರು- ಹುಣಸೂರು ರಸ್ತೆ ಹೊರ ವರ್ತುಲ ರಸ್ತೆ ಜಂಕ್ಷನ್‌ನಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣ ಕಾಮಗಾರಿಯ 22.81 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಒಪ್ಪಿಗೆ
  • ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಆದೇಶದನ್ವಯ ರಾಜ್ಯದಲ್ಲಿ ಕಲುಷಿತಗೊಳ್ಳುತ್ತಿರುವ 17 ನದಿ ಪಾತ್ರದಲ್ಲಿ ಬರುವ ನಗರ ಪಟ್ಟಣಗಳ ಒಳಚರಂಡಿ ಕಾಮಕಾರಿಯ 400 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ
  • ನಾರಾಯಣಪುರ ಬಲದಂಡೆ ಕಾಲುವೆ 0.00 ಕಿ.ಮೀ ರಿಂದ 95 ಕಿಮೀ ಆಧುನೀಕರಣ ಕಾಮಗಾರಿಯ 2794 ಕೋಟಿ ಮೊತ್ತದ ಪರಿಷ್ಕೃತ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ
  • ಕೃಷ್ಣಾ ನದಿಯಿಂದ ರಾಯಚೂರು ತಾಲೂಕಿನ 18 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು 192 ಕೋಟಿಗಳ ಅಂದಾಜು ಮೊತ್ತಕ್ಕೆ ಘಟನೋತ್ತರ ಅನುಮತಿ
  • ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ಮತ ಕ್ಷೇತ್ರದಲ್ಲಿನ 16 ಸಾವಿರ ಹೆಕ್ಟೇರ್ ನೀರಾವರಿ ವಂಚಿತ ಪ್ರದೇಶಕ್ಕೆ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ನೀರನ್ನು ಎತ್ತಿ ನೀರಾವರಿಗೊಳಪಡಿಸುವ ಕೆರೂರ್ ಏತ ನೀರಾವರಿ ಯೋಜನೆಯ 525 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆಗೆ ಘಟನೋತ್ತರ ಅನುಮತಿ

ABOUT THE AUTHOR

...view details