ಬೆಂಗಳೂರು:ರಾಜ್ಯದಲ್ಲಿ ಈಗಾಗಲೇ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದೀಗ ಮುಂದಿನ ಹೆಜ್ಜೆಯಾಗಿ ನಾಳೆಯಿಂದ ಫೆ. 10ರವರೆಗೆ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಸೂಚಿಸಲಾಗಿದೆ.
ಗೃಹ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ ವರ್ಗಕ್ಕೆ ಕೊರೊನಾ ಲಸಿಕೆ ನೀಡಲಾಗುತ್ತದೆ. ಇದರ ಜೊತೆಗೆ ಸಿಬ್ಬಂದಿಗೆ ಕೋವಿಡ್ ವ್ಯಾಕ್ಸಿನ್ ನೀಡಲು ಆದೇಶಿಸಲಾಗಿದೆ.