ಬೆಂಗಳೂರು:ರಾಜ್ಯದಲ್ಲಿ ಇದೇ ವರ್ಷದ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಮಕ್ಕಳಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭಾನುವಾರ ದೆಹಲಿಯಲ್ಲಿ ಭೇಟಿಯಾದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರವು ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಜೈಡಸ್ ಕ್ಯಾಡಿಲಾ ಕಂಪನಿಯೊಂದಿಗೆ ಮಕ್ಕಳಿಗೆ ಕೋವಿಡ್ ಲಸಿಕೆ ಬೆಲೆ ನಿಗದಿ ಕುರಿತಾಗಿ ಮಾತುಕತೆ ನಡೆಸುತ್ತಿದೆ ಎಂದು ಹೇಳಿದರು.