ಬೆಂಗಳೂರು: ಕಾಲೇಜು ಪ್ರವೇಶಿಸಲು ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಕೊರೊನಾ ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ವೈದ್ಯಕೀಯ ಕಾಲೇಜು ಪ್ರಾಧ್ಯಾಪಕರು ಅರ್ಜಿ ಸಲ್ಲಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರದ ನಿಯಮ ಪಾಲಿಸುವಂತೆ ಸಲಹೆ ನೀಡಿದೆ.
ಈ ಕುರಿತು ಮಂಗಳೂರಿನ ವೈದ್ಯ ಡಾ.ಶ್ರೀನಿವಾಸ ಬಿ.ಕಕ್ಕಿಲಾಯ, ಕರ್ನಾಟಕ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಬಿ.ಎನ್. ಹರಿಕೃಷ್ಣ ಮತ್ತಿತರರು ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಪ್ರಸ್ತಕ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಜುಲೈ 16ರಂದು ಸರ್ಕಾರದ ಆದೇಶ ಹೊರಡಿಸಿದೆ. ಆದರೆ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಾಲೇಜು ಪ್ರವೇಶಿಸಲು ಕೊರೊನಾ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು ಎಂದು ಷರತ್ತು ವಿಧಿಸಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಿದೆ.