ಕರ್ನಾಟಕ

karnataka

ETV Bharat / state

ಪರಿಶಿಷ್ಟ ಜಾತಿ-ಪಂಗಡಕ್ಕೆ ಆಸ್ತಿಯಾಗಿ ಸೃಜನೆಯಾಗುವ ಕ್ರಿಯಾ ಯೋಜನೆ ರೂಪಿಸಿ: ಡಿಸಿಎಂ ಕಾರಜೋಳ - DCM Karajola

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಹೋದವರು ಹೆಚ್ಚಾಗಿ ಅವರ ಗ್ರಾಮಗಳಲ್ಲಿದ್ದಾರೆ. ಅವರೆಲ್ಲರಿಗೂ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಉದ್ಯೋಗ ಕಾರ್ಡುಗಳನ್ನು ನೀಡಬೇಕು ಎಂದು ಡಿಸಿಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Create an Action Plan for the Scheduled Caste Tribe to Become an Asset: DCM Karajola
ಪರಿಶಿಷ್ಟ ಜಾತಿ-ಪಂಗಡಕ್ಕೆ ಆಸ್ತಿಯಾಗಿ ಸೃಜನೆಯಾಗುವ ಕ್ರಿಯಾ ಯೋಜನೆ ರೂಪಿಸಿ: ಡಿಸಿಎಂ ಕಾರಜೋಳ

By

Published : May 6, 2020, 11:48 PM IST

ಬೆಂಗಳೂರು: 2020-21ನೇ ಸಾಲಿನ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದವರಿಗೆ ಆಸ್ತಿಯಾಗಿ ಸೃಜನೆಯಾಗುವಂತಹ ಯೋಜನೆಗಳು/ಕಾರ್ಯಕ್ರಮಗಳ ಕ್ರಿಯಾ ಯೋಜನೆಯನ್ನು ರೂಪಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ 2020-21ನೇ ಸಾಲಿನ ಎಸ್‍ಸಿಪಿ ಮತ್ತು ಎಸ್‍ಟಿಪಿ ಕ್ರಿಯಾ ಯೋಜನೆ ಕುರಿತು ನೋಡಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ವಸತಿ ಇಲಾಖೆಯು ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಬೇಕು. ಕಳೆದ ವರ್ಷ ಅಪೂರ್ಣಗೊಂಡ ಮನೆಗಳನ್ನು ಪೂರ್ಣಗೊಳಿಸಬೇಕು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಹೋದವರು ಹೆಚ್ಚಾಗಿ ಅವರ ಗ್ರಾಮಗಳಲ್ಲಿದ್ದಾರೆ. ಅವರೆಲ್ಲರಿಗೂ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಉದ್ಯೋಗ ಕಾರ್ಡುಗಳನ್ನು ನೀಡಬೇಕು ಎಂದರು.

ಕೃಷಿ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ರೈತರ ಕುರಿತು ಮಾಹಿತಿ ಸಂಗ್ರಹಿಸಿ, ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು. ಗಂಗಾ ಕಲ್ಯಾಣ ಯೋಜನೆಯು ಅತ್ಯುತ್ತಮವಾದ ಯೋಜನೆಯಾಗಿದ್ದು, ಕೊಳವೆ ಬಾವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಕ್ರಮ ಕೈಗೊಳ್ಳಬೇಕು. ಈ ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದಿದ್ದಾರೆ.

ವಸತಿ ಶಾಲೆಗಳ ಆವರಣದಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಅಂತರ್ಜಲ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆಯ ಮಾಹಿತಿಯನ್ನು ಸಂಗ್ರಹಿಸಬೇಕು. ಯೋಜನೆವಾರು ಫಲಾನುಭವಿಗಳ ವಿವರವನ್ನು ಆ್ಯಪ್​​ನಲ್ಲಿ ಅಪ್​ಲೋಡ್ ಮಾಡಬೇಕು ಎಂದು ಸೂಚಿಸಿದ್ದಾರೆ.

ABOUT THE AUTHOR

...view details