ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ದುರುಪಯೋಗ ಪಡಿಸಿಕೊಂಡಿರುವ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಎಂ ಆಪ್ತ ಕಾರ್ಯದರ್ಶಿ ಡಾ ವೆಂಕಟೇಶಯ್ಯ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಕಾರ್ಯಾಲಯದಿಂದ ಲೋಕೋಪಯೋಗಿ ಇಲಾಖೆ ಸಚಿವರಿಗೆ ಹೊರಡಿಸಲಾಗಿದ್ದ ಕಡತದಲ್ಲಿ ಮುಖ್ಯಮಂತ್ರಿ ಆದೇಶದ ಮೇರೆಗೆ ಅಂಕಿತ್ ಎಂಬುವರಿಗೆ ತಾತ್ಕಾಲಿಕ ಹುದ್ದೆ ನೀಡುವಂತೆ ಉಲ್ಲೇಖಿಸಲಾಗಿತ್ತು. ರಾಜೇಂದ್ರ ಎಂಬ ಹೆಸರಿನಲ್ಲಿ ಸಹಿ ಇರುವ ನಕಲಿ ಲೆಟರ್ ಹೆಡ್ನಿಂದ ನೀಡಲಾಗಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಸಿಎಂ ಕಾರ್ಯಾಲಯದಲ್ಲಿ ರಾಜೇಂದ್ರ ಎಂಬ ಹೆಸರಿನ ವ್ಯಕ್ತಿಯೇ ಇಲ್ಲವಾಗಿರುವುದು ಗೊತ್ತಾಗಿದೆ.