ಕರ್ನಾಟಕ

karnataka

ETV Bharat / state

ಕ್ರಿಕೆಟ್​ ಬೆಟ್ಟಿಂಗ್​ ದಂಧೆ: ಇಬ್ಬರ ಬಂಧನ - Bookies Arrseted in Bangalore '

ಸೌತ್​ ಆಫ್ರಿಕಾ - ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್​ ಪಂದ್ಯದ ವೇಳೆ ಬೆಟ್ಟಿಂಗ್​ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಸಿಸಿಬಿ‌ ಪೊಲೀಸರು ಯಶಸ್ವಿಯಾಗಿದ್ದಾರೆ.

Bangalore
ಕ್ರಿಕೆಟ್​ ಬೆಟ್ಟಿಂಗ್​ ದಂಧೆಯಲ್ಲಿ ತೊಡಗಿದ್ದ ಇಬ್ಬರ ಬಂಧನ

By

Published : Mar 5, 2020, 8:08 PM IST

ಬೆಂಗಳೂರು: ಸೌತ್​ ಆಫ್ರಿಕಾ - ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್​ ಪಂದ್ಯದ ವೇಳೆ ಬೆಟ್ಟಿಂಗ್​ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಸಿಸಿಬಿ‌ ಪೊಲೀಸರು ಯಶಸ್ವಿಯಾಗಿದ್ದಾರೆ.

ವೆಂಕಟೇಶ್​ ಹಾಗೂ ಗೋಪಿನಾಥ್ ಬಂಧಿತ ಆರೋಪಿಗಳು. ಪುಟ್ಟೇನಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ಕನಕಪುರ ಮುಖ್ಯ ರಸ್ತೆಯ ಬಳಿ, ಸೌತ್​ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್​ ಪಂದ್ಯದ ಸೋಲು-ಗೆಲುವಿನ ಬಗ್ಗೆ ವೆಬ್​ಸೈಟ್ ಮೂಲಕ ಬೆಟ್ಟಿಂಗ್ ರೇಶ್ಯು ನೋಡಿಕೊಂಡು‌ ಮೊಬೈಲ್ ಫೋನ್ ಮೂಲಕ ಹಣವನ್ನು ಪಣವಾಗಿ ಇಟ್ಟು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಕೇಂದ್ರ ಅಪರಾಧ ವಿಭಾಗ ವಿಶೇಷ ವಿಚಾರಣಾ ದಳದ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳಿಂದ ನಗದು, 2 ಮೊಬೈಲ್​ಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details