ಬೆಂಗಳೂರು:ಸಿಸಿಬಿ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಬಗ್ಗು ಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಸಿಬಿ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಇಬ್ಬರ ಬಂಧನ
ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನೂತನ ಅಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಸಿಸಿಬಿ ಪೊಲೀಸರು ಫುಲ್ ಆ್ಯಕ್ಟಿವ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇಬ್ಬರ ಬಂಧನ
ಮಹೇಶ್ ಹಾಗೂ ಹರೀಶ್ ಬಂಧಿತ ಆರೋಪಿಗಳು. ಬನಶಂಕರಿ ಬಳಿ ಮಹೇಶ್ ಮನೆ ಹೊಂದಿದ್ದ. ಹಾಗೆಯೇ ಹರೀಶ್ ದಾಸರಹಳ್ಳಿ ಬಳಿ ಮನೆ ಹೊಂದಿದ್ದ. ಹಲವಾರು ಜನರನ್ನ ಸೇರಿಸಿಕೊಂಡು ಮೊಬೈಲ್ ಮೂಲಕ ಬೆಟ್ಟಿಂಗ್ ದಂಧೆ ಮಾಡುತ್ತಿದ್ದರು. ಈ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದ್ದು, ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂದಿತ ಆರೋಪಿಗಳಿಂದ 1,97,000 ರೂ. ಹಾಗೂ 2 ಮೊಬೈಲ್ ಫೋನ್ಗಳು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿಚಾರಣೆ ನಡೆಸಿದಾಗ ಈ ಗ್ಯಾಂಗ್ನಲ್ಲಿ ಹಲವಾರು ವ್ಯಕ್ತಿಗಳು ಭಾಗಿಯಾಗಿರುವ ವಿಚಾರ ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.