ಬೆಂಗಳೂರು: ವೆಬ್ಸೈಟ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿ ಅಂದರ್ - ಕ್ರಿಕೆಟ್ ಬೆಟ್ಟಿಂಗ್
ವೆಬ್ಸೈಟ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಸಾಗರ್ ಬಂಧಿತ ಆರೋಪಿ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರ ಸರಣಿ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಭಾರತ ಮತ್ತು ವೆಸ್ಟ್ ಇಂಡೀಸ್ ದೇಶದ ತಂಡಗಳ ನಡುವೆ ನಡೆದ ಅಂತಾರಾಷ್ಟ್ರೀಯ ಪಂದ್ಯಗಳ ಸೋಲು ಗೆಲುವಿನ ಕುರಿತು loutsbook24.com ಎಂಬ ಆ್ಯಪ್ ಹಾಗೂ ವೆಬ್ಸೈಟ್ಗಳ ಮೂಲಕ ಬೆಟ್ಟಿಂಗ್ ಮಾಡಿಕೊಂಡು ಮೊಬೈಲ್ ಮೂಲಕ ಹಣ ಪಣವಾಗಿಟ್ಟುಕೊಂಡು ಆಟವಾಡುತ್ತಿದ್ದರು ಎನ್ನಲಾಗ್ತಿದೆ.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಆರೋಪಿಯನ್ನು ವಿಚಾಋಣೆ ನಡೆಸಿದಾಗ ಈತ ಬಹಳಷ್ಟು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ವಿಚಾರ ತಿಳಿದು ಬಂದಿದೆ. ಸದ್ಯ ಆರೋಪಿಯಿಂದ ನಗದು ವಶಪಡಿಸಿಕೊಂಡು ತನಿಖೆ ಮುಂದುವರೆಸಲಾಗಿದೆ.