ಕರ್ನಾಟಕ

karnataka

ETV Bharat / state

Mangaluru crime: ಇನ್​​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ ಮೇಲೆ ಮದುವೆ ಹೆಸರಲ್ಲಿ ವಿವಾಹಿತನಿಂದ ಅತ್ಯಾಚಾರ.. ಆರೋಪಿ ಬಂಧನ - ಸಾಮಾಜಿಕ ಜಾಲತಾಣ ಇನ್​​ಸ್ಟಾಗ್ರಾಂ

ಇನ್​​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ವಿವಾಹಿತನೋರ್ವ ಅತ್ಯಾಚಾರ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

man-arrested-after-rape-allegations-by-instagram-girl-friend-in-mangaluru
ಇನ್​​ಸ್ಟಾಗ್ರಾಂನಲ್ಲಿ ಪರಿಚಯ.. ಮದುವೆ ಹೆಸರಲ್ಲಿ ಯುವತಿ ಮೇಲೆ ವಿವಾಹಿತನಿಂದ ಅತ್ಯಾಚಾರ : ಆರೋಪಿ ಬಂಧನ

By

Published : Jun 29, 2023, 5:31 PM IST

Updated : Jun 29, 2023, 6:27 PM IST

ಮಂಗಳೂರು: ಸಾಮಾಜಿಕ ಜಾಲತಾಣ ಇನ್​​ಸ್ಟಾಗ್ರಾಂನಲ್ಲಿ ಯುವತಿಯನ್ನು ಪರಿಚಯಿಸಿಕೊಂಡ ವಿವಾಹಿತನೋರ್ವ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

24 ವರ್ಷದ ಸಂತ್ರಸ್ತ ಮಹಿಳೆಗೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದನು. ಇವರಿಬ್ಬರು ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಆರೋಪಿಯು ಸಂತ್ರಸ್ತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಮಂಗಳೂರಿನ ಖಾಸಗಿ ಹೋಟೆಲ್ ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ರೂಮ್ ಪಡೆದುಕೊಂಡು ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. 2023ರ ಮೇ 28ರಿಂದ ಸುಮಾರು 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಬಳಿಕ ಸಂತ್ರಸ್ತೆಗೆ ಆರೋಪಿಗೆ ಈಗಾಗಲೇ ಮದುವೆಯಾಗಿರುವ ವಿಚಾರ ಗೊತ್ತಾಗಿದೆ. ಈ ಸಂಬಂಧ ಸಂತ್ರಸ್ತೆ ನಡೆದಿರುವ ವಿಷಯಗಳನ್ನು ಮನೆಯಲ್ಲಿ ತಿಳಿಸಿದ್ದಾಳೆ. ಆ ಬಳಿಕ ಠಾಣೆಗೆ ಬಂದು ದೂರು ನೀಡಿದ್ದಾಳೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ 52/2023 ಕಲಂ 417, 376, 506 ಐಪಿಸಿಯಂತೆ ಕೇಸು ದಾಖಲಾಗಿದೆ.

ಈ ಸಂಬಂಧ ಆರೋಪಿ ಅನೀಶ್ ರಹಮಾನ್​​ನನ್ನು ಮಂಗಳೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 40/2023 ಕಲಂ 27 ಬಿ.ಎನ್.ಡಿ.ಪಿ.ಎಸ್. ಆ್ಯಕ್ಟ್ ನಂತೆ ಕೂಡಾ ಪ್ರಕರಣ ದಾಖಲಾಗಿದೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲೋಕೇಶ್ ಎ.ಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಒಂಟಿ ಮಹಿಳೆ ಅತ್ಯಾಚಾರ, ಕೊಲೆ ಪ್ರಕರಣ..ಆರೋಪಿಗೆ ಜೀವಾವಧಿ ಶಿಕ್ಷೆ : ಮನೆಗೆ ನುಗ್ಗಿ ಒಂಟಿ ಮಹಿಳೆಯನ್ನು ಅತ್ಯಾಚಾರ ಮಾಡಿ, ಹತ್ಯೆ ಮಾಡಿದ ಪ್ರಕರಣ ಸಾಬೀತಾದ ಹಿನ್ನೆಲೆ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿತ್ತು. ಮಂಜೇಶ್ವರ ನಿವಾಸಿ ಮೊಹಮ್ಮದ್‌ ಅಶ್ರಫ್‌ (33) ಶಿಕ್ಷೆಗೊಳಗಾದ ವ್ಯಕ್ತಿ.

ಮೊಹಮ್ಮದ್‌ ಅಶ್ರಫ್‌ ಕೂಲಿ ಕೆಲಸ ಮಾಡಿಕೊಂಡಿದ್ದನು. ಈತನಿಗೆ ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಈತ ಬಾಳೆಪುಣಿ ಗ್ರಾಮದ ಬೆಳ್ಕೆರಿಯಲ್ಲಿರುವ ಸಂತ್ರಸ್ತ ಮಹಿಳೆಯ ಸಹೋದರನ ಮನೆಗೆ ತೋಟದ ಕೆಲಸಕ್ಕೆಂದು ಬಂದಿದ್ದ. ಆ ವೇಳೆ ಮಹಿಳೆ ಮನೆಯಲ್ಲಿ ಒಂಟಿಯಾಗಿರುವುದನ್ನು ಗಮನಿಸಿದ್ದನು. ಬಳಿಕ ಮಹಿಳೆಯನ್ನು ಪರಿಚಯಿಸಿಕೊಂಡಿದ್ದನು.

2020ರ ಸೆ.24ರಂದು ಬೆಳಗ್ಗೆ 10ಗಂಟೆಗೆ ಮಹಿಳೆಯನ್ನು ಅತ್ಯಾಚಾರ ಮಾಡುವ ಉದ್ದೇಶದಿಂದಲೇ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದ. ಈ ವೇಳೆ ಬಾತ್‌ರೂಮ್‌ನಲ್ಲಿ ಕ್ಲೀನ್‌ ಮಾಡುತ್ತಿದ್ದರು. ಈ ವೇಳೆ ಮಹಿಳೆಯನ್ನು ಹಿಂದಿನಿಂದ ಬಿಗಿಯಾಗಿ ಹಿಡಿದು ನೆಲಕ್ಕೆ ಬೀಳಿಸಿದ್ದ. ಪ್ರಜ್ಞಾಹೀನವಾಗಿ ಬಿದ್ದ ಸಂತ್ರಸ್ತೆಯನ್ನು ಅತ್ಯಾಚಾರವಸೆಗಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ.

ನಂತರ ಮಹಿಳೆಯ ಕಿವಿಯೋಲೆ, ಮನೆಯಲ್ಲಿದ್ದ 18 ಸಾವಿರ ರೂ. ದೋಚಿ, ಮಹಿಳೆಯ ಮೈಮೇಲಿನ ಬಟ್ಟೆಗಳಿಗೆ ಬೆಂಕಿ ಇಟ್ಟು ಸಾಕ್ಷ್ಯ ನಾಶ ಮಾಡಿ ಸ್ಥಳದಿಂದ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕೊಣಾಜೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು 2021ರ ಜು.13ರಂದು ಬಂಧಿಸಿದ್ದರು.

ಇದನ್ನೂ ಓದಿ :ಅಪ್ರಾಪ್ತ ಮಲಮಗಳನ್ನೇ ಅತ್ಯಾಚಾರ ಮಾಡಿದ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್​

Last Updated : Jun 29, 2023, 6:27 PM IST

ABOUT THE AUTHOR

...view details