ಕರ್ನಾಟಕ

karnataka

ETV Bharat / state

ಬೆಂಗಳೂರು: ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ಚೆನ್ನೈ ಮೂಲದ ಆರೋಪಿಗಳ ಬಂಧನ

ಕಾರಿನಲ್ಲಿ ಹಣ ತೆಗೆದುಕೊಂಡು ಹೋಗುವವರನ್ನೇ ಟಾರ್ಗೆಟ್ ಮಾಡಿ ತಮ್ಮ ಕೈಚಳಕ ತೋರಿಸುತ್ತಿದ್ದ ಚೆನ್ನೈ ಮೂಲದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ‌.

Rajarajeshwari Nagar Station
ರಾಜರಾಜೇಶ್ವರಿ ನಗರ ಠಾಣೆ

By

Published : Jun 15, 2023, 2:12 PM IST

ಬೆಂಗಳೂರು : ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ಇಬ್ಬರು ಆರೋಪಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ‌. ಕರ್ನಾಟಕ, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಹಣ ದೋಚುವುದನ್ನೇ ಕಾಯಕ ಮಾಡಿಕೊಂಡಿದ್ದ ಚೆನ್ನೈ ಮೂಲದ ಕಾರ್ತಿಕ್ (37), ಅನುಮೋದಾಸ್ (44) ಬಂಧಿತ ಆರೋಪಿಗಳು.

ಕಾರಿನಲ್ಲಿ ಹಣ ಕೊಂಡೊಯ್ಯುವವರನ್ನ ಗಮನಿಸಿ ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು‌ ಅವರ ಗಮನ ಬೇರೆಡೆ ಸೆಳೆದು ಹಣ ಎಗರಿಸುತಿದ್ದರು. ಇದೇ ತಿಂಗಳಿನಲ್ಲಿ ರಾಜರಾಜೇಶ್ವರಿ ನಗರದಲ್ಲಿ ಇನೋವಾ ಕಾರಿನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಯಾಮಾರಿಸಿದ್ದ ಆರೋಪಿಗಳು, 15 ಲಕ್ಷ ರೂಪಾಯಿ ಎಗರಿಸಿ ಪರಾರಿಯಾಗಿದ್ದರು.

ಹಣ ಕಳೆದುಕೊಂಡ ವ್ಯಕ್ತಿ ನೀಡಿದ ದೂರಿನನ್ವಯ ತನಿಖೆ ಕೈಗೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, 13.97 ಲಕ್ಷ ರೂ ನಗದು, ಒಂದು ಕಾರು, ಎರಡು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ : ಹಾಡಹಗಲೇ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ‌ ಗಾಜುಗಳನ್ನು ಒಡೆದು ಅದರಲ್ಲಿದ್ದ ಕೆಲ ಬೆಲೆಬಾಳುವ ವಸ್ತುಗಳ ಜೊತೆಗೆ ಲ್ಯಾಪ್​ಟಾಪ್​ ದೋಚಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಸಿದ್ದಾರ್ಥ್ ಎಂಬುವರು ಟ್ವೀಟ್ ಮಾಡುವ ಮೂಲಕ ಬೆಂಗಳೂರು ನಗರ ಪೊಲೀಸರ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ :ಶಿವಮೊಗ್ಗದಲ್ಲಿ ಬೈಕ್ ಮೇಲೆ ಬಂದು ಮೊಬೈಲ್ ಕದ್ದು ಪರಾರಿ ಪ್ರಕರಣ : ಬಾಲಕರ ಬಂಧನ, 23 ಮೊಬೈಲ್ ವಶಕ್ಕೆ

ಮೂವರು ಆರೋಪಿಗಳ ಬಂಧನ :ಐಫೋನ್ ಹಾಗೂ ದುಬಾರಿ ಬೆಲೆಯ ಫೋನ್​ಗಳನ್ನೇ ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಿವೇಕನಗರ ಪೊಲೀಸರು ಕಳೆದ ಜೂನ್​ 7 ರಂದು ಬಂಧಿಸಿದ್ದರು. ಬಂಧಿತರು ಗೋರಿಪಾಳ್ಯದ ನಿವಾಸಿಗಳಾಗಿದ್ದು, ಶಾಕೀಬ್, ಸುಹೈಲ್ ಹಾಗೂ ಮೊಹಮ್ಮದ್ ಸಕ್ಲೇನ್ ಎಂದು ಗುರುತಿಸಲಾಗಿತ್ತು. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಕಳ್ಳತನದ ಅಡ್ಡದಾರಿ ಹಿಡಿದಿದ್ದರು. ನಗರದಲ್ಲಿ ರಾತ್ರಿ ಹೊತ್ತು ಒಂಟಿಯಾಗಿ ಓಡಾಡುವರನ್ನು ಗುರಿಯಾಗಿಸಿಕೊಂಡು ಕೃತ್ಯ ಎಸಗುತ್ತಿದ್ದರು. ನಂತರ, ಬೈಕ್​ನಲ್ಲಿ‌ ತೆರಳಿ ಐಫೋನ್​ಗಳನ್ನು‌ ಕಸಿದುಕೊಂಡು ಪರಾರಿಯಾಗುತ್ತಿದ್ದರು.

ಇದನ್ನೂ ಓದಿ :ಐಫೋನ್​​ಗಳೇ ಇವರ ಟಾರ್ಗೆಟ್; ಒಂಟಿಯಾಗಿ ಓಡಾಡುವವರ ಸುಲಿಗೆ ಮಾಡುತ್ತಿದ್ದ ಆರೋಪಿಗಳ ಬಂಧನ

ಮನೆಗಳ್ಳರ ಬಂಧನ : ಹಗಲಿನ ವೇಳೆ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮೂವರು ಮನೆಗಳ್ಳರನ್ನು ನಿನ್ನೆ ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಂಧಿತ ಆರೋಪಿಗಳಲ್ಲಿ ಇಬ್ಬರು ಹಾಸನ ಮೂಲದವರಾಗಿದ್ದು, ಮತ್ತೊಬ್ಬ ಮೈಸೂರು ಜಿಲ್ಲೆಗೆ ಸೇರಿದವನಾಗಿದ್ದಾನೆ.

ಇದನ್ನೂ ಓದಿ :ಬೀಗ ಹಾಕಿದ ಮನೆಗಳೇ ಟಾರ್ಗೆಟ್ : ಮೂವರು ಮನೆಗಳ್ಳರ ಬಂಧಿಸಿದ ಮೈಸೂರು ಪೊಲೀಸರು

ABOUT THE AUTHOR

...view details