ಬೆಂಗಳೂರು:ಕಟ್ಟಡದ 9ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಗುರುವಾರ ಸಂಜೆ ನಡೆದಿದೆ. ವಿಜಯಲಕ್ಷ್ಮೀ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಖಾಸಗಿ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ಓದುತಿದ್ದ ವಿಜಯಲಕ್ಷ್ಮಿ, ಪೋಷಕರ ವಿಚ್ಛೇದನದ ಬಳಿಕ ತನ್ನ ತಾಯಿಯೊಂದಿಗೆ ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಜ್ಞಾನಜ್ಯೋತಿ ನಗರದಲ್ಲಿ ವಾಸವಿದ್ದಳು. ಕಳೆದ ಒಂದು ವಾರದಿಂದ ಆಕೆ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಸೆ.19ರಂದು ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಹೋಗಿದ್ದವಳು ವಾಪಸ್ ಆಗಿರಲಿಲ್ಲ. ಸ್ನೇಹಿತರ ಜತೆಗೆ ಹೋಗಿರಬಹುದು ಎಂದು ಭಾವಿಸಿದ್ದ ತಾಯಿ, ಒಂದು ದಿನ ಕಳೆದ ಬಳಿಕ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದರು. ಅದರಂತೆ ಜ್ಞಾನಭಾರತಿ ಠಾಣೆಗೆ ತೆರಳಿ ದೂರು ನೀಡಲು ಹೋದಾಗ ಮಗಳ ಸಾವಿನ ಸುದ್ದಿ ಗೊತ್ತಾಗಿದೆ.
ಸಾಯುವ ಮುನ್ನ ವಿಜಯಲಕ್ಷ್ಮಿ ಮಂಗಳೂರಿಗೆ ಹೋಗಿ ಬಂದಿರುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಆತ್ಮಹತ್ಯೆ.. ಶವವಿಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ರಾಮನಗರದಲ್ಲಿ ವ್ಯಕ್ತಿ ಆತ್ಮಹತ್ಯೆ: ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ರಾಮನಗರ ಜಿಲ್ಲೆಯ ಘಟನೆ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ರವಿಚಂದ್ರ (35) ಮೃತ ವ್ಯಕ್ತಿ. ಈತ ರಸ್ತೆ ಬದಿಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದ. ಇತ್ತೀಚೆಗೆ ವ್ಯಾಪಾರದ ವಿಚಾರವಾಗಿ ಬಾಡಿಗೆ ಅಂಗಡಿಯವರಿಗೂ ಮೃತ ವ್ಯಕ್ತಿಯ ನಡುವೆ ಗಲಾಟೆಯಾಗಿತ್ತು. ಇದರಿಂದ ಮನನೊಂದ ರವಿಚಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಅಲ್ಲದೇ, ದೊಡ್ಡಾಲಹಳ್ಳಿ ಗ್ರಾಮದ ಸರ್ಕಲ್ನಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇತ್ತೀಚಿನ ಆತ್ಮಹತ್ಯೆ ಪ್ರಕರಣ
- ಕಿರುಕುಳ ಆರೋಪ-ವ್ಯಕ್ತಿ ಆತ್ಮಹತ್ಯೆ:ಎರಡು ದಿನಗಳ ಹಿಂದೆಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ತಲಘಟ್ಟಪುರದ ನಾಗರಾಜ್ (47) ಮೃತರು. ಸನಾವುಲ್ಲಾ ಎಂಬಾತನ ಒಡೆತನದಲ್ಲಿರುವ ಕಂಪನಿಯಲ್ಲಿ ನಾಗರಾಜ್ ಕೆಲಸ ಮಾಡುತ್ತಿದ್ದರು. ಈ ಕಂಪನಿಯ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನಟರಾಜ್ ಎಂಬವರು ವೈಯಾಲಿಕಾವಲ್ ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್ ಅವರನ್ನು ಪೊಲೀಸರು ಕರೆದೊಯ್ದು ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು. ಇದರಿಂದ ಮನನೊಂದು ನಾಗರಾಜ್ ಎರಡು ಪುಟಗಳ ಡೆತ್‌ನೋಟ್ ಬರೆದು ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ದೂರಲಾಗಿದೆ.
ಇದನ್ನೂ ಓದಿ:ಪೊಲೀಸರ ಕಿರುಕುಳ ಆರೋಪ: ಬೆಂಗಳೂರಲ್ಲಿ ಓರ್ವ ಆತ್ಮಹತ್ಯೆ