ಬೆಂಗಳೂರು: ಬಿಜೆಪಿಯ ರೌಡಿ ಮೋರ್ಚಾಗೆ ಕ್ರೈಮ್ ಸ್ಕೋರ್ ಮುಖ್ಯ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ. ರೌಡಿಗಳಿಗೆ ಬಿಜೆಪಿ ರಾಜಮರ್ಯಾದೆ ಕೊಡುತ್ತಿರುವಾಗ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ. ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ ಆ್ಯಕ್ಟಿವ್ ಆಗಿದೆ. ಆರಗ ಜ್ಞಾನೇಂದ್ರ ಅವರೇ, ಭೂಗತಲೋಕಕ್ಕೆ ಧೈರ್ಯ ಬಂದಿದ್ದು ನಿಮ್ಮಿಂದಲೇ ಅಲ್ಲವೇ?. ಇದು ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಕನ್ನಡಿಯಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬಿಜೆಪಿ ರೌಡಿ ಮೋರ್ಚಾಗೆ ಕ್ರೈಂ ಸ್ಕೋರ್ ಮುಖ್ಯ ಅಲ್ಲವೇ?: ಕಾಂಗ್ರೆಸ್ - Crime score is important for BJP
ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಬಿಲ್ಡರ್ ಮೇಲೆ ಗುಂಡಿನ ದಾಳಿಯಾಗಿದೆ. ಸರ್ಕಾರದ ಬೆಂಬಲವಿದೆ ಎಂದು ತಿಳಿದಿದ್ದೇ ತಡ ಭೂಗತಲೋಕ ಮತ್ತೆ ಆ್ಯಕ್ಟಿವ್ ಆಗಿದೆ. ಇದು ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಕನ್ನಡಿಯಲ್ಲವೇ? ಎಂದು ಬಿಜೆಪಿಯನ್ನು ಕಾಂಗ್ರೆಸ್ ಟೀಕಿಸಿದೆ.
ಕಾಂಗ್ರೆಸ್ ಟ್ವೀಟ್
ಬಿಜೆಪಿ ರೌಡಿಗಳಿಗೆ ಮಣೆ ಹಾಕುತ್ತಿರುವುದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿಯುತ್ತಿದೆ. ಇದಕ್ಕೆ ಬೆಂಗಳೂರಿನ ಶೂಟೌಟ್ ಘಟನೆಯೇ ಸಾಕ್ಷಿ. ಬಿಜೆಪಿಯಲ್ಲಿ ಸ್ಥಾನ ಪಡೆದುಕೊಳ್ಳಲು ರೌಡಿಗಳು ತಮ್ಮ ಕ್ರೈಮ್ ಸ್ಕೋರ್ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಟೀಕಿಸಿದೆ.
ಇದನ್ನೂ ಓದಿ:ಹೊಸಕೋಟೆ ಕಾಂಗ್ರೆಸ್ನಲ್ಲಿ ಮತ್ತೆ ಭಿನ್ನಮತ: ಶಾಸಕ ಶರತ್ ಬಚ್ಚೇಗೌಡ ವಿರುದ್ದ ಸಿಡಿದೆದ್ದ ಕಾರ್ಯಕರ್ತರು