ಕರ್ನಾಟಕ

karnataka

ETV Bharat / state

ಬೆಂಗಳೂರು: ಹೆಂಡತಿ ಮಕ್ಕಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..

Bengaluru crime: ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್​ನಲ್ಲಿ ಹೆಂಡತಿ ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಕ್ಕಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
ಮಕ್ಕಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ

By

Published : Aug 3, 2023, 4:57 PM IST

Updated : Aug 3, 2023, 5:25 PM IST

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಒಂದೇ‌ ಕುಟುಂಬದ ನಾಲ್ವರು ದುರಂತ ಅಂತ್ಯ ಕಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೆಹಳ್ಳಿಯ ಸಾಯಿಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಆಂಧ್ರ ಮೂಲದ ವಿರಾರ್ಜುನ (31), ಪತ್ನಿ ಹೇಮಾವತಿ (29), ಒಂದೂವರೆ ವರ್ಷದ ಹಾಗೂ 8 ತಿಂಗಳ ಮಕ್ಕಳು ಸಾವನ್ನಪ್ಪಿದವರು. ಜುಲೈ 31ರಂದು ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿನ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ಅನುಮಾನಗೊಂಡು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಬಾಗಿಲು ಒಡೆದು ಒಳಗೆ ಹೋಗಿ ಪರಿಶೀಲಿಸಿದಾಗ ನಾಲ್ವರು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಮಾಹಿತಿ ನೀಡಿದ ಮಾಹಿತಿ ಎಫ್​ಎಸ್ಎಲ್ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸುತ್ತಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದೇ ಕುಟುಂಬದ ನಾಲ್ವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ: ಆಂಧ್ರ ಮೂಲದ ವಿರಾರ್ಜುನಾ ಕಳೆದ ಆರು ವರ್ಷಗಳ ಹಿಂದೆ ಹೇಮಾವತಿಯೊಂದಿಗೆ ಮದುವೆ ಮಾಡಿಕೊಂಡಿದ್ದರು. ಕಾಡುಗೋಡಿಯ ಸಿಗೇಹಳ್ಳಿಯ ಸಾಯಿಗಾರ್ಡನ್ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದರು. ಸಾಫ್ಟ್ ವೇರ್ ಇಂಜಿನಿಯರ್ ಆಗಿ ವಿರಾರ್ಜುನಾ ಕೆಲಸ‌ ಮಾಡುತ್ತಿದ್ದರು. ಒಂದೇ ಕುಟುಂಬದ ನಾಲ್ವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪತ್ನಿ-ಮಕ್ಕಳನ್ನ ಹತ್ಯೆಗೈದ ಬಳಿಕ ವಿರಾರ್ಜುನಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ:Bengaluru crime: ಬೆಂಗಳೂರಿನಲ್ಲಿ ಪತ್ನಿ ಕೊಂದು ಅತ್ತೆಗೆ ಕರೆ ಮಾಡಿದ ಅಳಿಯ

Last Updated : Aug 3, 2023, 5:25 PM IST

ABOUT THE AUTHOR

...view details