ಕರ್ನಾಟಕ

karnataka

ETV Bharat / state

ಪೊಲೀಸ್ ಕ್ರಮದ ಹಿಂದೆ ಅಪರಾಧ ಹಿನ್ನೆಲೆ ಮಾತ್ರ ಪರಿಗಣನೆ.. ಆರಗ ಜ್ಞಾನೇಂದ್ರ - ಹತಾಶರಾದ ಕಾಂಗ್ರೆಸ್ ನಾಯಕರು

ಪೇ ಸಿಎಂ ಅಭಿಯಾನದ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಜನರು ಪಕ್ಷದಿಂದ ದೂರವಾಗುತ್ತಿದ್ದು, ಇದರಿಂದ ಹತಾಶರಾದ ಕಾಂಗ್ರೆಸ್ ನಾಯಕರು, ಇಂಥಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದರು.

Home Minister Araga Jnanendra
ಗೃಹ ಸಚಿವ ಆರಗ ಜ್ಞಾನೇಂದ್ರ

By

Published : Sep 22, 2022, 12:40 PM IST

ಬೆಂಗಳೂರು: ಪೊಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಃ, ಅಲ್ಪಸಂಖ್ಯಾತ, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ ಅಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ. ಖಚಿತ ಮಾಹಿತಿ ಮೇರೆಗೆ ಎನ್ಐಎ ಸಿಬ್ಬಂದಿ, ಹಲವು ಕಡೆ ಶೋಧ ನಡೆಸಿದ್ದಾರೆ ಎಂದರು.‌ ಶಿವಮೊಗ್ಗ ಪೊಲೀಸರು ಇಬ್ಬರು ವ್ಯಕ್ತಿಗಳು, ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ತನಿಖೆಯನ್ನು ಚುರುಕಿನಿಂದ ನಡೆಸಿರುವ ಪೊಲೀಸರ ಕಾರ್ಯಕ್ಷಮತೆಗೆ ಅಭಿನಂದಿಸುತ್ತೇನೆ ಎಂದೂ ಸಚಿವರು ತಿಳಿಸಿದರು.

ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪೇ ಸಿಎಂ ಅಭಿಯಾನದ ಬಗ್ಗೆ, ಕಟುವಾಗಿ ಪ್ರತಿಕ್ರಿಯಿಸಿದ ಸಚಿವರು, ಜನರು ಪಕ್ಷದಿಂದ ದೂರವಾಗುತ್ತಿದ್ದು, ಇದರಿಂದ ಹತಾಶರಾದ ಕಾಂಗ್ರೆಸ್ ನಾಯಕರು, ಇಂಥಹ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರೂ ಮಾಜಿ ವಿಧಾನಸಭಾ ಸ್ಪೀಕರ್ ಸಹ ಆಗಿದ್ದವರು, ಕಾಂಗ್ರೆಸ್ ನಾಯಕರ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಈಗಾಗಲೇ ಹೇಳಿದ್ದು, ಕಾಂಗ್ರೆಸ್ ನಾಯಕರ ಬಣ್ಣ ಬಯಲು ಮಾಡಿದೆ ಎಂದರು.

ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ- ಎಂಬಿಪಿ:ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ವಿಧಾನಸೌಧ ಕೆಂಗಲ್ ಗೇಟ್​ನ ಬಳಿ ಮಾತನಾಡಿ, ನಮ್ಮ ಕಾಂಗ್ರೆಸ್ ಪಕ್ಷದ ನಿಲುವು ಯಾವಾಗಲೂ ಒಂದೇ ಆಗಿದೆ. ಕಾಲ ಕಾಲಕ್ಕೆ ಬದಲಾಯಿಸುವುದಿಲ್ಲ. ಯಾವ ಸಂಘಟನೆಗಳು ಭಜರಂಗದಳ ಆಗಿಬಹುದು, ಪಿಎಫ್ಐ, ಎಸ್​ಡಿಪಿಐ, ಯಾವುದೇ ಸಂಘಟನೆ ಇರಲಿ.. ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಿ. ಎಲ್ಲವನ್ನು ಬ್ಯಾನ್ ಮಾಡಿ ಅಂತ ಹೇಳಿದ್ದೀವಿ. ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.

ಬ್ಯಾನ್ ಮಾಡಲು ತಯಾರಿಲ್ಲ. ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಾ ಇದ್ದಾರೆ. ನಮ್ಮ ನಾಯಕರಾದ ಸಿದ್ದರಾಮಯ್ಯ, ಯು.ಟಿ.ಖಾದರ್ ಒತ್ತಾಯ ಮಾಡಿದ್ದಾರೆ. ಎಲ್ಲ ಸಂಘಟನೆಗಳನ್ನು ಬ್ಯಾನ್ ಮಾಡಿ, ಅದಕ್ಕೆ ನಮ್ಮ ಬೆಂಬಲ ಕೂಡ ಇರುತ್ತೆ ಎಂದು ಹೇಳಿದರು.

ಇದನ್ನೂ ಓದಿ:ಮಂಗಳೂರಿನಲ್ಲಿ ಎನ್​ಐಎ ಪರಿಶೀಲನೆ ಮುಕ್ತಾಯ: ಮೂವರು ಪಿಎಫ್ಐ ಮುಖಂಡರು ವಶಕ್ಕೆ

ABOUT THE AUTHOR

...view details