ಕರ್ನಾಟಕ

karnataka

By

Published : Dec 24, 2019, 8:15 PM IST

Updated : Dec 24, 2019, 8:35 PM IST

ETV Bharat / state

ಗ್ಯಾಸ್​ ಪೈಪ್​​ಲೈನ್​​ಗೆ ಹಾನಿಯಾದರೆ ಕ್ರಿಮಿನಲ್ ಕೇಸ್:  ಭಾಸ್ಕರ್ ರಾವ್ ಎಚ್ಚರಿಕೆ

ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವ ದೂರುಗಳು ಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ತಿಳಿಸಿದರು.

Criminal case registration if gale gas pipeline material is damaged: Bhaskar Rao
ಗ್ಯಾಸ್​ ಪೈಪ್​​ಲೈನ್​​ಗೆ ಹಾನಿಯಾದರೆ ಕ್ರಿಮಿನಲ್ ಕೇಸ್:  ಭಾಸ್ಕರ್ ರಾವ್ ಎಚ್ಚರಿಕೆ

ಬೆಂಗಳೂರು:ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವ ದೂರುಗಳು ಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಎಚ್ಚರಿಕೆ ನೀಡಿದ್ದಾರೆ.

ಗೇಲ್ ಗ್ಯಾಸ್ ಪೈಪ್ ಲೈನ್ ವಸ್ತುಗಳಿಗೆ ಹಾನಿಯುಂಟು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲು: ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಇಂದು ಗೇಲ್ ಗ್ಯಾಸ್ ಲಿಮಿಟೆಡ್​​ನಿಂದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಗ್ಯಾಸ್ ವಿತರಣೆ ಕುರಿತ ‘ಸುರಕ್ಷತಾ ಜಾಗೃತಿ ಕಾರ್ಯಾಗಾರ'ದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಾಸ್ಕರ್‌ರಾವ್ ಉದ್ಯಾನನಗರಿ ಬೆಂಗಳೂರಿನಲ್ಲಿ ನೈಸರ್ಗಿಕ ಅನಿಲ ಪೈನ್ ಲೈನ್ ಅಳವಡಿಕೆ ಕಾರ್ಯ ವೇಗವಾಗಿ ನಡೆಯುತ್ತಿದೆ. ಆದರೆ ಇದರ ನಡುವೆ ಗೇಲ್ ಗ್ಯಾಸ್ ಪೈಪ್‌ಲೈನ್ ಸೇರಿ ಇನ್ನಿತರ ವಸ್ತುಗಳಿಗೆ ಹಾನಿಯುಂಟು ಮಾಡುವವರ ವಿರುದ್ಧ ದೂರುಗಳು ಹೆಚ್ಚಾಗುತ್ತಿದೆ. ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಮನೆ- ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡುವ ಯೋಜನೆ ಸಾಕಷ್ಟು ಸವಾಲಿನದು. ಅದನ್ನು ಗೇಲ್ ಗ್ಯಾಸ್ ಸಂಸ್ಥೆ ಉತ್ತಮವಾಗಿ ಅನುಷ್ಠಾನಗೊಳಿಸುತ್ತಿದೆ. ಆದರೆ, ಕೆಲವೆಡೆ ಖಾಸಗಿ ವ್ಯಕ್ತಿಗಳು ನಡೆಸುತ್ತಿರುವ ಕಾಮಗಾರಿಗಳಿಂದಾಗಿ ಗ್ಯಾಸ್ ಪೈಪ್‌ಗಳಿಗೆ ಹಾನಿಯಾಗುತ್ತಿದೆ ಎಂಬ ದೂರುಗಳಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆಯೆಂದು ತಿಳಿಸಿದರು.

Last Updated : Dec 24, 2019, 8:35 PM IST

ABOUT THE AUTHOR

...view details