ಬೆಂಗಳೂರು:ಗುರುವಾರ ರಾತ್ರಿಯಿಂದ ರಾಜ್ಯದಲ್ಲಿ ಜಾರಿಯಾಗಲಿರುವ ನೈಟ್ ಕರ್ಫ್ಯೂ ಅನ್ನು ಎಲ್ಲಾ ಜಿಲ್ಲೆಗಳಲ್ಲಿಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಜಿಲ್ಲಾಡಳಿತಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಸೂಚನೆ ನೀಡಿದ್ದಾರೆ.
ವಿಧಾನಸೌಧದಿಂದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಿಎಸ್ ವಿಜಯ ಭಾಸ್ಕರ್ ವಿಡಿಯೋ ಸಂವಾದ ನಡೆಸಿದರು. ಕೊರೊನಾ ರೂಪಾಂತರ ವೈರಾಣು ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ರಾತ್ರಿ 11 ರಿಂದ ಮುಂಜಾನೆ 5 ಗಂಟೆವರೆಗೂ ಕರ್ಫ್ಯೂ ವಿಧಿಸಲಾಗಿದೆ. ಗುರುವಾರ ರಾತ್ರಿಯಿಂದ ಜನವರಿ 2 ರ ಬೆಳಗ್ಗೆ 5 ಗಂಟೆಗೂ ಕರ್ಫ್ಯೂ ಇರಲಿದ್ದು ಎಲ್ಲಾ ಜಿಲ್ಲೆಗಳಲ್ಲಿಯೂ ಯಾವುದೇ ಲೋಪದೋಶಗಳಾಗದ ರೀತಿ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚನೆ ನೀಡಿದರು.