ಕರ್ನಾಟಕ

karnataka

ಸಿಎಸ್ಐಟಿಎ ಆಸ್ತಿ ಪ್ರಕರಣ ತನಿಖೆಗೆ ಮಧ್ಯಂತರ ತಡೆಯಾಜ್ಞೆ

By

Published : Oct 8, 2020, 11:21 PM IST

ಬೆಂಗಳೂರು ನಗರದ ಹೊಸೂರು ರಸ್ತೆಯಲ್ಲಿರುವ ಚರ್ಚ್ ಆಫ್ ಸೌತ್ ಇಂಡಿಯಾ ಟ್ರಸ್ಟ್ ಅಸೋಸಿಯೇಷನ್ (ಸಿಎಸ್​ಐಟಿಎ) ವಿರುದ್ಧ ಜಾರಿ ನಿರ್ದೇಶನಾಲಯ ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

banglore
ಹೈಕೋರ್ಟ್

ಬೆಂಗಳೂರು: ನಗರದ ಹೊಸೂರು ರಸ್ತೆಯಲ್ಲಿರುವ ಚರ್ಚ್ ಆಫ್ ಸೌತ್ ಇಂಡಿಯಾ ಟ್ರಸ್ಟ್ ಅಸೋಸಿಯೇಷನ್ (ಸಿಎಸ್​ಐಟಿಎ) ವಿರುದ್ಧ ಜಾರಿ ನಿರ್ದೇಶನಾಲಯ ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸಂಸ್ಥೆಯ ಆಸ್ತಿ ಮುಟ್ಟುಗೋಲಿಗೆ ಮುಂದಾಗಿರುವ ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಸಿಎಸ್ಐಟಿಎ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಪ್ರಕರಣದ ಹಿನ್ನೆಲೆ:

ರಕ್ಷಣಾ ಇಲಾಖೆಗೆ ಸೇರಿರುವ ಜಾಗವನ್ನು ಟ್ರಸ್ಟ್​ನವರು ಮೆಟ್ರೋಗೆ ನೀಡಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ರಕ್ಷಣಾ ಅಧಿಕಾರಿಗಳ ವಿರುದ್ಧ 2019ರ ಆಗಸ್ಟ್ 17ರಂದು ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಕಳೆದ ಸೆಪ್ಟೆಂಬರ್ 8 ರಂದು ಸಿಎಸ್ಐಟಿಎ ಆಸ್ತಿ ಮುಟ್ಟುಗೋಲಿಗೆ ಆದೇಶ ಹೊರಡಿಸಿತ್ತು.

ಆಲ್ ಸೇಂಟ್ಸ್ ಚರ್ಚ್​ಗೆ ಸೇರಿದ್ದು ಎನ್ನಲಾದ ಜಾಗವನ್ನು ನಮ್ಮ ಮೆಟ್ರೋ ಯೋಜನೆಗಾಗಿ 2017 ರಲ್ಲಿ ಕೆಐಎಡಿಬಿ ವಶಪಡಿಸಿಕೊಂಡಿತ್ತು. ಅದಕ್ಕೆ ಟ್ರಸ್ಟ್ ಮಂಡಳಿಯಿಂದ ಪರಿಹಾರ ಮೊತ್ತ ಪಡೆದುಕೊಂಡಿತ್ತು. ಆದರೆ ಇದೀಗ ಜಾಗ ಮೂಲತಃ ರಕ್ಷಣಾ ಇಲಾಖೆಗೆ ಸೇರಿತ್ತು ಎನ್ನಲಾಗುತ್ತಿದೆ.

ABOUT THE AUTHOR

...view details