ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಬಯಲುಸೀಮೆ ನೀರಾವರಿ ಯೋಜನೆ ಆರಂಭ ಕಾರ್ಯಕ್ರಮ ಕುರಿತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಹಾಲಿ, ಮಾಜಿ ಸಿಎಂ ಭೇಟಿಯಾದ ಸಿ.ಟಿ ರವಿ.. ಕಾರಣ? - ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ
ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಿ ಟಿ ರವಿ ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಸಿ.ಟಿ ರವಿ ಆಗಮಿಸಿದರು. ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು. ತರೀಕೆರೆ ಶಾಸಕ ಡಿ. ಎಸ್ ಸುರೇಶ್ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಉಪಸ್ಥಿತಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಹಾಗೂ ಬಯಲುಸೀಮೆ ನೀರಾವರಿ ಯೋಜನೆ ಕುರಿತು ಮಾತುಕತೆ ನಡೆಸಿದರು.
ಇದಕ್ಕೂ ಮುನ್ನ ಕಾವೇರಿ ನಿವಾಸಕ್ಕೆ ಆಗಮಿಸಿದ ಸಿ.ಟಿ ರವಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು. ಬಯಲು ಸೀಮೆ ನೀರಾವರಿ ಯೋಜನೆಯ ಪ್ರಾರಂಭ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.