ಬೆಂಗಳೂರು:ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ವಿಧೇಯಕವನ್ನು ಕಾಂಗ್ರೆಸ್ ನಾಯಕರು ಪ್ರಶ್ನಿಸುತ್ತಿದ್ದಾರೆ. ಅವರದ್ದು ಸೋಗಲಾಡಿತನ ಅನ್ನುವುದು ಈಗ ಅರ್ಥ ಆಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನವರು ಹಿಂದೆಯೂ ಹಿಂದೂ ಪರ ಇರಲಿಲ್ಲ, ಈಗಲೂ ಇಲ್ಲ ಅನ್ನೋದು ಗೊತ್ತಾಗುತ್ತಿದೆ ಎಂದು ಟೀಕಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ನಂಜನಗೂಡು ದೇವಸ್ಥಾನ ಕೆಡವಲಾಗಿತ್ತು. ದೊಡ್ಡ ಪ್ರಮಾಣದಲ್ಲಿ ಭಕ್ತಾಧಿಗಳ ಭಾವನೆಗೆ ಧಕ್ಕೆಯಾಗಿತ್ತು. ಹೊಸ ಮಸೂದೆಯನ್ನು ತರುವ ಮೂಲಕ ದೇವಸ್ಥಾನ ರಕ್ಷಣೆ ಭರವಸೆಯನ್ನು ಸರ್ಕಾರ ನೀಡಿದೆ. ಸರ್ಕಾರದ ಈ ನೀತಿಯನ್ನು ಸ್ವಾಗತಿಸುವುದಾಗಿ ಹೇಳಿದ್ರು.