ಬೆಂಗಳೂರು: ಬೆಂಗಳೂರಿನ ಮಾರುಕಟ್ಟೆಗೆ ಹಾಲು ಮತ್ತು ಮೊಸರನ್ನು ಸರಬರಾಜು ಮುಂದಾಗಿರುವ ಗುಜರಾತ್ ಮೂಲದ ಅಮುಲ್ ಬೆಂಬಲಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ. ನಂದಿನಿ-ಅಮುಲ್ ಕುರಿತಂತೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆ ನಡುವೆಯೇ ಸಿ.ಟಿ ರವಿ ಟ್ವೀಟ್ ಮೂಲಕ ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
''ಗುಲಾಮರಿಗೆ ಇಟಾಲಿಯನ್ ಆಳ್ವಿಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಆದರೆ ಭಾರತೀಯ ಬ್ರಾಂಡ್ ಅಮುಲ್ ತನ್ನ ಉತ್ಪನ್ನಗಳನ್ನು ಇತರ ಹಲವು ಬ್ರಾಂಡ್‌ಗಳಂತೆ ಕರ್ನಾಟಕದಲ್ಲಿ ಮಾರಾಟ ಮಾಡುವಾಗ ಅವರಿಗೆ ಸಮಸ್ಯೆ ಇದೆ. ಎಂತಹ ಸೋತವರ ಗುಂಪು ಇದು!'' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.
"ಕಾಂಗ್ರೆಸ್ ನಮ್ಮ ತಾಯಂದಿರು ಹಾಗು ಅಕ್ಕಂದಿರನ್ನು ಕೇವಲ ಸಗಣಿ ಬಾಚಲು ಬಿಟ್ಟಿತ್ತು. ಆದರೆ ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಬ್ಸಿಡಿ ಕೊಟ್ಟು ಗ್ರಾಮೀಣ ಕುಟುಂಬಗಳ ಬದುಕನ್ನು ಸಮೃದ್ಧಿಗೊಳಿಸಿತು. ನಂದಿನಿ ಈಗಾಗಲೇ 12 ರಾಜ್ಯಗಳಲ್ಲಿ ವಹಿವಾಟು ನಡೆಸುತ್ತಿದ್ದು, ಇನ್ನೂ ಹೆಚ್ಚು ರಾಜ್ಯಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಿದೆ" ಎಂದೂ ಸಹ ಸಿ.ಟಿ ರವಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಅಮುಲ್ ರಾಜ್ಯ ಪ್ರವೇಶ: ಸಾಮಾಜಿಕ ಜಾಲತಾಣದಲ್ಲಿ ವಿರೋಧದ ಅಲೆ.. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹೇಳುವುದೇನು?