ಬೆಂಗಳೂರು: ಕೋವಿಡ್ 2ನೇ ಅಲೆಯ ಸ್ವರೂಪ ತೀವ್ರವಾಗಿದ್ದು, ಹಲವರಿಗೆ ಆರ್ಟಿ-ಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದು ಸಿಟಿ ಸ್ಕ್ಯಾನಿಂಗ್‌ನಲ್ಲಿ ಸೋಂಕು ಇರುವುದು ಕಂಡು ಬರುತ್ತಿದೆ. ಹೀಗಾಗಿ ಜನಸಾಮಾನ್ಯರು ಆತಂಕಕ್ಕೆ ಒಳಗಾಗಿ ಸಿಟಿ ಸ್ಕ್ಯಾನ್ ಮಾಡಿಸಲು ಮುಂದಾಗುತ್ತಿದ್ಧಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಹಲವು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿ ದರ ನಿಗದಿ ಮಾಡುತ್ತಿರುವುದು ಕಂಡು ಬಂದಿದೆ.
ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ. ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ ಗಾಗಿ 1,500 ರೂ., ಡಿಜಿಟಲ್ ಎಕ್ಸ್‌ರೇ 250 ರೂಪಾಯಿ ನಿಗದಿಪಡಿಸಲಾಗಿದೆ.