ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ):ದುಬೈನಿಂದ ಬಂದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ ಐರನ್ ಬಾಕ್ಸ್ ಒಳಗಡೆ ಮಾರೆಮಾಚಿ ಚಿನ್ನ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ನ.29 ರಂದು ದುಬೈನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯುವಕನೋರ್ವ(22) ಬಂದಿದ್ದ. ಯುವಕನ ಮೇಲೆ ಸಂಶಯಗೊಂಡ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನ ಬ್ಯಾಗ್ ಅನ್ನು ಸ್ಕ್ಯಾನರ್ ಮೂಲಕ ತಪಾಸಣೆ ನಡೆಸಿದಾಗ ಅನುಮಾನಾಸ್ಪದ ವಸ್ತು ಕಂಡು ಬಂದಿದೆ. ಬಳಿಕ ಅತ್ಯಾಧುನಿಕ ಸ್ಕ್ಯಾನರ್ ಮೂಲಕ ಪರಿಶೀಲಿಸಿದಾಗ ಐರನ್ ಬಾಕ್ಸ್ ಒಳಗಡೆ ಇಡಲಾಗಿದ್ದ ಚಿನ್ನ ಪತ್ತೆಯಾಗಿದೆ.