ಬೆಂಗಳೂರು:ವಾಟ್ಸ್ಆ್ಯಪ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರಿಗೆ ಆಶ್ಲೀಲ ಫೋಟೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಹಾಸನ ಅರಕಲಗೂಡಿನ ಕಂಚೇನಹಳ್ಳಿ ನಿವಾಸಿ ಹರೀಶ್ ಬಂಧಿತ ಆರೋಪಿ. ಈತ ಕಳೆದ ಮೂರು ತಿಂಗಳಿಂದ ಮಹಿಳೆಯೊಬ್ಬರಿಗೆ ವಾಟ್ಸ್ಆ್ಯಪ್, ಫೇಸ್ಬುಕ್ ಮೂಲಕ ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದನು. ಪದೇ ಪದೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಬೇಸತ್ತ ಮಹಿಳೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.