ಬೆಂಗಳೂರು: ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಹಾಸನ, ಧಾರವಾಡ, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಮೇ 16 ರಂದು ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆದರೆ ಮೇ 17 ರಿಂದ 20ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ ಹವಾಮಾನ ಮುನ್ಸೂಚನೆಯನ್ನು ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ ನೀಡಿದ್ದು, ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ ಎನ್ನುವ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಕೊಲ್ಲೂರು 24 ಸೆಂಮೀ, ಕೋಟ 19 ಸೆಂಮೀ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು 19 ಸೆಂಮೀ, ಕುಂದಾಪುರ 16 ಸೆಂಮೀ, ಭಟ್ಕಳ 16 ಸೆಂಮೀ, ಉಡುಪಿ 15 ಸೆಂಮೀ, ಧರ್ಮಸ್ಥಳ 14 ಸೆಂಮೀ, ಶಿವಮೊಗ್ಗ 19 ಸೆಂಮೀ, ಭಾಗಮಂಡಲ 17 ಸೆಂಮೀ ಮಳೆಯಾಗಿದೆ ಎಂದು ತಿಳಿಸಿದ್ದಾರೆ.