ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ಯಾಸ್ ಚಂಡಮಾರುತ ಒಡಿಶಾ ಕರಾವಳಿಗೆ ಇಂದು ಅಪ್ಪಳಿಸಿದೆ. ಈ ಚಂಡಮಾರುತದಿಂದ ರಾಜ್ಯದ ಮೇಲೆ ಅಷ್ಟಾಗಿ ಪರಿಣಾಮ ಬೀಳದೆ ಇರುವುದರಿಂದ, ಚಂಡಮಾರುತದಿಂದ ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾಸ್ ಚಂಡಮಾರುತದಿಂದ ರಾಜ್ಯಕ್ಕಿಲ್ಲ ಅಷ್ಟೊಂದು ಪ್ರಭಾವ! - cyclone Yass that crashed the orissa
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾತನಾಡಿದರು
ರಾಜ್ಯದಲ್ಲಿ ಮಳೆ ಮುನ್ಸೂಚನೆ ಬಗ್ಗೆ ಮಾಹಿತಿ ನೀಡಿದ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್, ಮೇ. 26 ರಿಂದ ಮೇ.30 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಲಿದ್ದು, ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗಲಿದೆ ಎಂದು ತಿಳಿಸಿದರು.
ಓದಿ:ಕಳೆದ 73 ವರ್ಷಗಳಿಂದ ದೊರೆಸ್ವಾಮಿ ಪತ್ರಿಕೆ ಕಾಪಿಟ್ಟುಕೊಂಡು ಬಂದಿದೆ ಈ ರೈತ ಕುಟುಂಬ..!