ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳು ಇದೇ ಫೆಬ್ರವರಿ 13 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿವೆ. ಈ ಸಂಬಂಧ ಪ್ರತಿಕ್ರಿಯಿಸಿರುವ, ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ನಾವಿಂದು ವಿಶ್ವ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕಿದ್ದು, ವರದಿ ಜಾರಿಗೆ ತರುವ ವಿಚಾರದಲ್ಲಿ ಓಲೈಕೆ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ.
ಡಾ.ಸರೋಜಿನಿ ಮಹಿಷಿ ವರದಿ... ಓಲೈಕೆ ರಾಜಕಾರಣ ಮಾಡುವುದಿಲ್ಲ: ಡಾ.ಅಶ್ವತ್ಥ ನಾರಾಯಣ್
ನಾವಿಂದು ವಿಶ್ವ ಮಟ್ಟದಲ್ಲಿ ಸ್ಪರ್ಧೆ ಮಾಡಬೇಕಿದ್ದು, ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವ ವಿಚಾರದಲ್ಲಿ ಓಲೈಕೆ ರಾಜಕಾರಣ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ನಮ್ಮ ಸರ್ಕಾರ ಕನ್ನಡಿಗರ ಪರವಾಗಿ ಕೆಲಸ ಮಾಡುತ್ತಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ನಾವು ಭಾರತೀಯರು ಎಂಬುದನ್ನು ಮರೆಯೋ ಹಾಗಿಲ್ಲ. ಬೆಂಗಳೂರು ಈ ಮಟ್ಟಕ್ಕೆ ಬೆಳೆಯಲು ನಮ್ಮ ಔದಾರ್ಯತೆ, ಎಲ್ಲರನ್ನು ಪ್ರೀತಿಯಿಂದ ಒಪ್ಪಿಕೊಳ್ಳುವ ಗುಣವೇ ಕಾರಣ. ಹೀಗಾಗಿ ಈ ವೈವಿಧ್ಯತೆಯನ್ನು ನಾವು ಉಳಿಸಿಕೊಳ್ಳಬೇಕು ಎಂದರು.
ನಾವಿಂದು ಸ್ಪರ್ಧೆಯಲ್ಲಿದ್ದೇವೆ, ಇದು ಕೇವಲ ಸ್ಥಳಿಯವಾಗಿರದೇ ವಿಶ್ವಮಟ್ಟದಲ್ಲಿದೆ. ಹಾಗಾಗಿ ಕೇವಲ ಮೀಸಲಾತಿಯೆಂಬುದಕ್ಕಿಂತ ಇವತ್ತು ಪ್ರತಿಭೆಗೆ ಅವಕಾಶವನ್ನು ನೀಡಬೇಕಿದೆ. ಈ ವಿಚಾರದಲ್ಲಿ ನಾನು ಯಾವುದೇ ರಾಜಕೀಯವನ್ನು ಮಾಡುತ್ತಿಲ್ಲ ಎಂದರು.ನಾವು ನಮ್ಮ ಶಕ್ತಿಯನ್ನು ನಂಬಿ, ಹೆಚ್ಚಿನ ತಯಾರಿಯನ್ನು ನಡೆಸಿದರೆ ಮಾತ್ರ ಉತ್ತಮ ಭವಿಷ್ಯವನ್ನು ಕಾಣಬಹುದು, ಮುಖ್ಯವಾಗಿ ಸರ್ಕಾರ ಕನ್ನಡಿಗರ ಪರವಾಗಿ ಕೆಲಸ ಮಾಡುತ್ತದೆ ಎಂದಿದ್ದಾರೆ.