ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಪ್ರತಿಭಟನೆ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.
ಬಿಜೆಪಿ ಸರ್ಕಾರ ರೈತರ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ: ಡಿಕೆಶಿ ಗಂಭೀರ ಆರೋಪ - ಡಿಕೆ ಶಿವಕುಮಾರ್ ರೈತ ಪ್ರತಿಭಟನೆ ಸಂಬಂಧ ಹೇಳಿಕೆ
ಬಿಜೆಪಿ ಸರ್ಕಾರ ಪ್ರತಿಭಟನಾಕಾರರಿಗೆ ಹೋರಾಟ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
"ಇತರ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವ ರೈತರನ್ನು ಪೊಲೀಸರು ತಡೆದಿದ್ದಾರೆ. ಬೆಂಗಳೂರಿಗೆ ಬರಲು ಅವಕಾಶ ನೀಡುತ್ತಿಲ್ಲ ಎಂದು ನನಗೆ ಹಲವಾರು ಫೋನ್ ಕರೆಗಳು ಬಂದಿವೆ. ಆದರೆ ಪ್ರತಿಭಟನಾಕಾರರು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಬಂದು ಬೃಹತ್ ಪ್ರತಿಭಟನಾ ಱಲಿಯಲ್ಲಿ ಭಾಗವಹಿಸುವಂತೆ ನಾನು ವಿನಂತಿಸುತ್ತೇನೆ" ಎಂದರು.
ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪ
ಪ್ರತಿಭಟನೆ ನಡೆಸಲು ಅವಕಾಶ ನೀಡದಿದ್ದರೆ ಹೆದ್ದಾರಿಗಳು, ರಸ್ತೆಗಳನ್ನು ನಿರ್ಬಂಧಿಸಿ ಪ್ರತಿಭಟನೆ ಮಾಡಿ ಎಂದು ಡಿಕೆಶಿ ಕರೆ ನೀಡಿದ್ದಾರೆ.