ಬೆಂಗಳೂರು:ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕಾಂಗ್ರೆಸ್ ನಾಯಕ ಸೈಯದ್ ಜಮೀರ್ ಪಾಷಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಡೆದರು.
ಜಮೀರ್ ಪಾಷಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ.ಶಿವಕುಮಾರ್ - ಕಾಂಗ್ರೆಸ್ ನಾಯಕ ಜಮೀರ್ ಪಾಷಾ ನಿಧನ
ಕೊರೊನಾ ಮಹಾಮಾರಿಗೆ ತುತ್ತಾಗಿ ಕಳೆದ ರಾತ್ರಿ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕಾಂಗ್ರೆಸ್ ನಾಯಕ ಸೈಯದ್ ಜಮೀರ್ ಪಾಷಾ ಅವರ ಪಾರ್ಥಿವ ಶರೀರ ಅಂತಿಮ ದರ್ಶನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಡೆದರು.
ಬೆಂಗಳೂರಿನ ರಿಚ್ಮಂಡ್ ಟೌನ್ನಲ್ಲಿರುವ ಅವರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಡಿಕೆಶಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಶಾಸಕ ಎನ್.ಎ. ಹ್ಯಾರಿಸ್ ಜೊತೆಗಿದ್ದರು.
67 ವರ್ಷದ ನಿವೃತ್ತ ಅಧಿಕಾರಿ ಕರ್ನಾಟಕ ಸರ್ಕಾರದಲ್ಲಿ ವಿವಿಧ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ರಾಜ್ಯ ಸರ್ಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಕಾರ್ಯದರ್ಶಿಯಾಗಿ ಕೂಡ ಜವಾಬ್ದಾರಿ ನಿಭಾಯಿಸಿದ್ದರು. ಮಾರಕ ರೋಗ ಕೊರೊನಾಗೆ ತುತ್ತಾಗಿದ್ದ ಅವರು ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.