ಕರ್ನಾಟಕ

karnataka

ETV Bharat / state

ಹಗಲು ವೇಳೆ ಕೊರೊನಾ ಹರಡುವುದಿಲ್ಲವೇ?: ಡಿ.ಕೆ.ಶಿವಕುಮಾರ್ - D k shivakumar outrage aganist night curfew

ಬಿಜೆಪಿಯವರು ಸರ್ಕಾರವನ್ನು ತಮ್ಮ ಖಾಸಗಿ ಆಸ್ತಿಯಂತೆ ಭಾವಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದರು.

D k shivakumar
ಡಿಕೆಶಿ

By

Published : Dec 24, 2020, 3:53 PM IST

Updated : Dec 24, 2020, 4:12 PM IST

ಬೆಂಗಳೂರು: ರಾಜ್ಯ ಸರ್ಕಾರ ತನಗೆ ಇಚ್ಛೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೊರೊನಾ ಹರಡುವುದಿಲ್ಲವೇ?, ಹಗಲು ಎಲ್ಲವನ್ನೂ ಮುಕ್ತಗೊಳಿಸಿ, ರಾತ್ರಿ ಕರ್ಫ್ಯೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸುಧಾಕರ್ ಆಗಲಿ, ಬೇರೆ ಯಾರೇ ಆಗಲಿ, ಯಾರೊಬ್ಬರ ಹೇಳಿಕೆಗೂ ನಾನು ಉತ್ತರ ನೀಡಲ್ಲ. ಕೊರೊನಾ ಸಮಯದಲ್ಲಿ ನಾವು ಸಹಕಾರ ಕೊಟ್ಟಿಲ್ಲ ಅಂತಾ ಮುಖ್ಯಮಂತ್ರಿಗಳು ಹೇಳಲಿ, ನೋಡೋಣ. ಅವರು ಮಾಡುವ ಭ್ರಷ್ಟಾಚಾರಗಳಿಗೆ ನಾವು ಸಹಕಾರ ಕೊಡಬೇಕಾ?, ಅದರಲ್ಲಿ ಭಾಗಿಯಾಗಬೇಕಾ?, ಇವರು ಪ್ರಚಾರಕ್ಕೋಸ್ಕರ ಏನು ಬೇಕೋ ಅದನ್ನು ಮಾಡುತ್ತಿದ್ದಾರೆ. ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಇವರಿಗೆ ಹೇಳೋರು, ಕೇಳೋರು ಯಾರೂ ಇಲ್ಲ ಎಂದರು.

ಡಿ.ಕೆ.ಶಿವಕುಮಾರ್

ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರ್ಕಾರದ ಪ್ರತಿನಿಧಿಗಳು ಜನರನ್ನು ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಹಗಲು ವೇಳೆ ಓಡಾಟ ಮಾಡಬಹುದು, ರಾತ್ರಿ ಹೊತ್ತು ಕರ್ಫ್ಯೂ ಮಾಡುವುದೇಕೆ?, ಇದರಿಂದ ಸೋಂಕು ನಿಯಂತ್ರಣ ಸಾಧ್ಯವಾ?, ಈ ಬಗ್ಗೆ ಯಾರ ಬಳಿ ಚರ್ಚೆ ಮಾಡಿದ್ದಾರೆ?, ರಾತ್ರಿ ವೇಳೆ ಸೋಂಕು ಹರಡುತ್ತದೆ ಎನ್ನುವುದಕ್ಕೆ ಪುರಾವೆ, ದಾಖಲೆಗಳಿವೆಯೇ?, ಹಗಲು ವೇಳೆ ಹರಡುವುದಿಲ್ಲವೇ?, ಹಗಲಲ್ಲಿ ಸಾವಿರಾರು ಜನ ಸೇರುತ್ತಾರೆ, ಆಗ ಕೊರೊನಾ ಸೋಂಕು ತಗುಲುವುದಿಲ್ಲವೇ? ಯಾವುದೋ ಕೆಲವು ವರ್ಗಗಳಿಗೆ ತೊಂದರೆ ಕೊಡಲು ತೀರ್ಮಾನ ಕೈಗೊಳ್ಳಬಾರದು. ಹೊಸ ವರ್ಷ ಆಚರಣೆ ಬೇರೆ ವಿಚಾರ ಎಂದಿದ್ದಾರೆ.

ಓದಿ:ಕೊರೊನಾ ರೂಪಾಂತರ ವೈರಸ್​​​​​​​​​​​​​ ಹಿನ್ನೆಲೆಯಲ್ಲಿ ನೈಟ್​ ಕರ್ಫ್ಯೂ.. ನಾವ್​ ಮೂವರೂ ಅಣ್ಣ-ತಮ್ಮಂದಿರು ಎಂದ ಸುಧಾಕರ್​

ನೀವು ಕೊರೊನಾ ನಿಯಂತ್ರಣ ಎಲ್ಲಿ ಮಾಡಿದ್ದೀರಿ? ಸುಮ್ಮನೆ ವಿರೋಧ ಪಕ್ಷಗಳ ಬಗ್ಗೆ ಮಾತನಾಡುವುದಲ್ಲ. ಅಧಿವೇಶನ ಕರೆಯಿರಿ. ಎಲ್ಲರೂ ಚರ್ಚೆ ಮಾಡೋಣ. ಅವರ ಇಷ್ಟಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಅವರು ಸರ್ಕಾರವನ್ನು ತಮ್ಮ ಖಾಸಗಿ ಆಸ್ತಿ ಎಂದು ಭಾವಿಸಿದ್ದಾರೆ. ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯಾರನ್ನಾದರೂ ಕರೆದು ಮಾತನಾಡಿದ್ದಾರಾ? ಯಾರದಾದರೂ ಸಲಹೆ ಪಡೆದಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

Last Updated : Dec 24, 2020, 4:12 PM IST

For All Latest Updates

TAGGED:

ABOUT THE AUTHOR

...view details