ಬೆಂಗಳೂರು:ಯಾರೇ ಆಗಲಿ ಕಾನೂನಿಗೆ ಗೌರವ ಕೊಡಬೇಕು. ಅಶಾಂತಿ ಮೂಡಿಸುವ ಕೆಲಸ ಯಾರೂ ಮಾಡಬಾರದು. ನಾವೆಲ್ಲ ಹಿಂದೂಗಳಲ್ವೇ? ನಮಗೆ ಹಬ್ಬ ಇಲ್ವೇ. ಭಾವನೆಗಳಿಗೆ ಧಕ್ಕೆ ತರುವಂತಹ ಕೆಲಸವನ್ನು ಯಾರೂ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದಲ್ಲಿ ತಮ್ಮ ನಿವಾಸದಲ್ಲಿ ಗಣೇಶ ಚತುರ್ಥಿ ಪೂಜೆ ಆಚರಿಸಿದ ಡಿಕೆಶಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ನಾಡಿನ ಜನರ ಕಷ್ಟಗಳನ್ನು ಪರಿಹಾರ ಮಾಡು ಅಂತ ಆ ಗಣಪನಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಗಣೇಶ ಚತುರ್ಥಿ ಎಲ್ಲರಿಗೂ ಶುಭವನ್ನು ತರಲಿ ಎಂದು ಹಾರೈಸುವೆ. ಎಲ್ಲರೂ ಚೆನ್ನಾಗಿರಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದರು.
ಈದ್ಗಾ ಮೈದಾನದ ಕೋರ್ಟ್ ತೀರ್ಪಿನ ಕುರಿತು ಮಾತನಾಡಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಕೆಲಸವನ್ನು ಯಾರೂ ಮಾಡಬಾರದು. ಕಾನೂನಿಗೆ ಎಲ್ಲರೂ ಗೌರವ ನೀಡಬೇಕು. ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಬಾರದು. ದೇಶದಲ್ಲಿ ಉದ್ಯೋಗ ಹೋಗ್ತಾ ಇದೆ. ಎಕಾನಮಿ ಬಿದ್ದು ಹೋಗ್ತಿದೆ. ಮಂಗಳೂರು ಇಷ್ಟೊತ್ತಿಗೆ ಎರಡನೇ ಮುಂಬೈ ಆಗಬೇಕಿತ್ತು. ಯಾಕೆ ಬೆಳವಣಿಗೆ ಆಗಲಿಲ್ಲ ಎಂದು ಪ್ರಶ್ನಿಸಿದರು.