ಕರ್ನಾಟಕ

karnataka

ETV Bharat / state

ನಮಗೆ ತೊಂದರೆ ಕೊಟ್ಟು ಕೋರ್ಟ್​ಗೆ ಅಲೆಸಬೇಕು ಅನ್ನೋದು ಬಿಜೆಪಿ ರಾಜಕಾರಣ: ಡಿಕೆಶಿ

ಪ್ರತಿಭಟನೆಯಲ್ಲಿ 10 ಸಾವಿರ ಜನ ಸೇರಿದ್ದರೂ ಕೇವಲ ನಮ್ಮ ಮೇಲೆ ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ. ನಾವು ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ, ಅದು ಬೇರೆ ವಿಚಾರ. ಆದರೆ, ಪ್ರತಿಯೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಕಿಡಿಕಾರಿದರು.

ನಮಗೆ ತೊಂದರೆ ಕೊಟ್ಟು ಕೋರ್ಟ್​ಗೆ ಅಲೆಸಬೇಕು ಅನ್ನೋದು ಬಿಜೆಪಿ ಕಾಜಕಾರಣ: ಡಿಕೆಶಿ
ನಮಗೆ ತೊಂದರೆ ಕೊಟ್ಟು ಕೋರ್ಟ್​ಗೆ ಅಲೆಸಬೇಕು ಅನ್ನೋದು ಬಿಜೆಪಿ ಕಾಜಕಾರಣ: ಡಿಕೆಶಿ

By

Published : Apr 22, 2022, 4:45 PM IST

Updated : Apr 22, 2022, 6:13 PM IST

ಬೆಂಗಳೂರು: ಈ ಸರ್ಕಾರ ಕೋವಿಡ್ ಬೆಡ್, ಔಷಧಿ, ನೇಮಕಾತಿ, ಮಠಗಳಿಂದಲೂ ಸಹ ಕಮಿಷನ್ ಪಡೆಯುತ್ತಿದೆ. ಹಾಗೆಯೇ ಬೆಂಗಳೂರು ಪಾಲಿಕೆ ಕಸ ಗುಡಿಸುವ ವಿಚಾರದವರೆಗೂ ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಪಿಎಸ್​​ಐ ನೇಮಕಾತಿ ಹಗರಣ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಈ ಹಗರಣದ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ನಾವೇ ಇದನ್ನು ಮೊದಲು ಬೆಳಕಿಗೆ ತಂದಿದ್ದೇವೆ. ಈ ಹಗರಣ ನಡೆದ ಶಿಕ್ಷಣ ಸಂಸ್ಥೆ ಸಂಸ್ಥಾಪಕರು ಗೃಹ ಸಚಿವರ ಜತೆ ಉತ್ತಮ ಒಡನಾಟ ಇಟ್ಟುಕೊಂಡಿರುವ ಫೋಟೋಗಳು ಬಂದಿವೆ. ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿದ್ದು, ಪರೀಕ್ಷೆ ಬರೆದ 52 ಸಾವಿರ ಅಭ್ಯರ್ಥಿಗಳಿಗೆ ಮೋಸ ಆಗಿದೆ. ಪ್ರತಿ ಹುದ್ದೆಗೆ 70-80 ಲಕ್ಷ ಹಣ ಕೊಟ್ಟಿರುವ ವರದಿ ಬಂದಿದೆ. ಇದೊಂದು ಭ್ರಷ್ಟ ಸರ್ಕಾರ ಎಂದು ಟೀಕಿಸಿದರು.


ಇದನ್ನೂ ಓದಿ: ಹಿಜಾಬ್​ಗೆ ಪಟ್ಟು: ವಿದ್ಯಾರ್ಥಿನಿಯರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಉಡುಪಿ ಶಾಸಕ

ನಾವು ದೇಶದ ರೈತರ ಪರವಾಗಿ ಹೋರಾಟ ಮಾಡಿದ ವಿಚಾರವಾಗಿ ನಮ್ಮ ಮೇಲೆ ದೂರು ದಾಖಲಾಗಿದ್ದು, ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಾರೆಂಟ್ ಆಗಿತ್ತು. ದಾಖಲಾದ ದೂರಿನಲ್ಲಿ ದಿನಾಂಕ 20-01-21 ರಂದು ಫ್ರೀಡಂ ಪಾರ್ಕ್​​ನಲ್ಲಿ 10 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡಿದ್ದು, ವಿಪತ್ತು ನಿರ್ವಹಣೆ ಕಾಯ್ದೆ ಅಡಿಯಲ್ಲಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನೆಯಲ್ಲಿ 10 ಸಾವಿರ ಜನ ಸೇರಿದ್ದರೂ ಕೇವಲ ನಮ್ಮ ಮೇಲೆ ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿದ್ದಾರೆ. ನಾವು ಕಾನೂನು ಗೌರವಿಸಿ ಜಾಮೀನು ಪಡೆದು ಬಂದಿದ್ದೇವೆ, ಅದು ಬೇರೆ ವಿಚಾರ. ಆದರೆ, ಪ್ರತಿಯೊಂದು ಪ್ರಕರಣದಲ್ಲೂ ನಮ್ಮ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಮೇಕೆದಾಟು ಪಾದಯಾತ್ರೆ ಸಂಬಂಧ ರಾಮನಗರ, ಕನಕಪುರ, ಬೆಂಗಳೂರಲ್ಲಿ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಮಗೆ ತೊಂದರೆ ನೀಡಿ, ಕೋರ್ಟ್ ಗೆ ಅಲೆಸಬೇಕು ಎಂದು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಈಶ್ವರಪ್ಪ ಹಾಗೂ ರಾಘವೇಂದ್ರ ಅವರು ಸೆಕ್ಷನ್ 144 ಉಲ್ಲಂಘನೆ ಮಾಡಿದ್ದರಲ್ಲ, ಅಲ್ಲಿ ನ್ಯಾಯಾಲಯ, ಕಾನೂನು ಇರಲಿಲ್ಲವೇ? ಎಂದು ಪ್ರಶ್ನಿಸಿದರು.

Last Updated : Apr 22, 2022, 6:13 PM IST

For All Latest Updates

TAGGED:

ABOUT THE AUTHOR

...view details